ಕೇಂದ್ರದಿಂದ ಬರ ಪರಿಹಾರ ಸಂಬಂಧ ಯಾವುದೇ ಪ್ರತಿಕ್ರಿಯೆ ಬಂದಿಲ್ಲ -ಸಿದ್ದರಾಮಯ್ಯ

ಬೆಂಗಳೂರು:- ಕೇಂದ್ರದಿಂದ ಬರ ಪರಿಹಾರ ಸಂಬಂಧ ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಬರ ಪರಿಹಾರ ಸಂಬಂಧ ಕೇಂದ್ರಕ್ಕೆ ಬರೆದ ಪತ್ರಗಳಿಗೆ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ. ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ ರೂ.2,000 ವರೆಗೆ ಬೆಳೆ ಪರಿಹಾರ ಹಣ ಬಿಡುಗಡೆ ಮಾಡುತ್ತಿದ್ದೇವೆ.

ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನಗಳ ಉದ್ಯೋಗ ಕೊಡಲು ಕೇಂದ್ರಕ್ಕೆ ಅನುಮತಿ ಕೋರಲಾಗಿತ್ತು. ಆದರೆ ಇನ್ನೂ ಅನುಮತಿ ನೀಡಿಲ್ಲ. ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಮೂರು ಹಂತದಲ್ಲಿ ಘೋಷಿಸಿದ್ದೇವೆ‌. ರೂ.18,171 ಕೋಟಿ ಪರಿಹಾರದ ಆರ್ಥಿಕ ನೆರವು ನೀಡಲು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರ ನಮ್ಮ ತೆರಿಗೆ ಹಣದ ಪಾಲನ್ನು ನಮಗೆ ವಾಪಾಸ್ ಕೊಟ್ಟರೂ ಸಾಕು ನಮ್ಮ ರೈತರ ಕಷ್ಟಕ್ಕೆ ಸಹಾಯವಾಗುತ್ತಿತ್ತು.

ಸೆಪ್ಟಂಬರ್ 21 ರಂದು ಬರಪರಿಹಾರಕ್ಕಾಗಿ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೆವು. ಕೇಂದ್ರದ ತಂಡ ಅಕ್ಟೋಬರ್ 4 ರಿಂದ 9ರ ವರೆಗೆ ರಾಜ್ಯ ಪ್ರವಾಸ ಮಾಡಿ ಬರ ಸಮೀಕ್ಷೆ ನಡೆಸಿ, ವರದಿ ನೀಡಿದೆ. ನಾವೆಲ್ಲಾ ಕೇಂದ್ರ ತಂಡವನ್ನು ಭೇಟಿ ಮಾಡಿ ಚರ್ಚಿಸಿ ಬರದ ಸ್ಥಿತಿ ವಿವರಿಸಿದ್ದೇವೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. ರೂ.4,663 ಕೋಟಿ ಬೆಳೆ ನಷ್ಟ ಪರಿಹಾರ ಕೇಂದ್ರಕ್ಕೆ ಕೇಳಿದ್ದೆವು. ಕೇಂದ್ರ ಸಚಿವರಿಗೂ ಮನವಿ ಮಾಡಿದ್ದೇವೆ. ಕೇಂದ್ರ ಕೃಷಿ ಮತ್ತು ಗೃಹ ಸಚಿವರನ್ನು ಖುದ್ದು ಭೇಟಿ ಮಾಡಲು ಸಮಯ ಕೊಡಿ ಎಂದು ಪತ್ರ ಬರೆದಿದ್ದೆ. ಇವತ್ತಿನವರೆಗೂ ಸಮಯ ಕೊಟ್ಟಿಲ್ಲ ಎಂದು ಆರೋಪಿಸಿದ್ದಾರೆ

Loading

Leave a Reply

Your email address will not be published. Required fields are marked *