ಬೆಂಗಳೂರು: ವಿಧಾನಸೌಧದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಮುಖಂಡ ಜನಾರ್ದನ ರೆಡ್ಡಿ ಮತದಾನ ಮಾಡಿದ್ದಾರೆ. ಅವರು ಯಾರಿಗೆ ಮತದಾನ ಮಾಡಿದ್ದಾರೆ ಎಂಬ ವಿಚಾರ ಭಾರೀ ಚರ್ಚೆಯಾಗಿದೆ. ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಹಾಕಿದ್ದೇನೆ ಎಂದು ಅವರು ಮಾರ್ಮಿಕ ಹೇಳಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಮತದಾನ ಮಾಡಿದ ಬಳಿಕ ಯಾರಿಗೆ ಮತ ಹಾಕಿದ್ದೀರಾ ಎಂಬ ಪ್ರಶ್ನೆಗೆ ಅದು ನನ್ನ ಆತ್ಮಕ್ಕೆ ಗೊತ್ತಿದೆ ಎಂದಷ್ಟೇ ಹೇಳಿದರು. ಅವರು ಕಾಂಗ್ರೆಸ್ ಗೆ ವೋಟ್ ಹಾಕಿರುವ ಸಾಧ್ಯತೆ ಇದೆ. ಅವರನ್ನು ಒಪ್ಪಿಸುವಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಯಶಸ್ವಿಯಾಗಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.
ರಾಜ್ಯಸಭಾ ಚುನಾವಣೆಗೆ ಮುನ್ನಾದಿನವಾದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.