ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕೆಟ್ಟ ಸರ್ಕಾರವನ್ನು ತೆಗೆದು ಹಾಕಲು ಆದಷ್ಟು ಬೇಗ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಆದರೆ ಉತ್ತಮ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು.
ಎಚ್ ಡಿ ಕುಮಾರಸ್ವಾಮಿ ಭೇಟಿಯ ಹಿಂದೆ ವಿಶೇಷತೆ ಏನಿಲ್ಲ. ಬದಲಾಗಿ ಆರೋಗ್ಯ ವಿಚಾರಿಸಲು ಬಂದಿದ್ದೆ. ಒಳ್ಳೆದಾಗಲಿ ಎಂದು ಹಾರೈಸಿದ್ದೇನೆ ಎಂದರು ಹೇಳಿದರು. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರವಾಗಿ ಹೈಕಮಾಂಡ್ ನಿರ್ಧಾರವನ್ನು ಸ್ವಾಗತ ಮಾಡುತ್ತೇನೆ. ಈ ಕೆಟ್ಟ ಸರ್ಕಾರವನ್ನು ತೆಗೆಯಲು ಹಾಗೂ ಮುಂದಿನ ದಿನಗಳಲ್ಲಿ ಸೂಕ್ತ ಹೋರಾಟ ಮಾಡಲು ಆದಷ್ಟು ಬೇಗ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಆದರೆ ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.