ಅಧಿಕೃತ ನಿವಾಸ ತೆರವುಗೊಳಿಸಲು ಮಹುವಾ ಮೊಯಿತ್ರಾಗೆ ಸೂಚನೆ

ನವದೆಹಲಿ: ಪ್ರಶ್ನೆ ಕೇಳಲು (Cash for Query) ಲಂಚ ಪಡೆದ ಆರೋಪದ ಹಿನ್ನೆಲೆಯಲ್ಲಿ ಲೋಕಸಭೆಯಿಂದ ಉಚ್ಛಾಟನೆಯಾಗಿರುವ ಟಿಎಂಸಿ (TMC) ಸಂಸದೆ ಮಹುವಾ ಮೊಯಿತ್ರಾ (Mahua Moitra) ಶ್ರೀಘ್ರವೇ ತಮ್ಮ ಅಧಿಕೃತ ನಿವಾಸವನ್ನು ತೊರೆಯಲಿದ್ದಾರೆ. ಲೋಕಸಭೆಯ (Lok Sabha) ವಸತಿ ಸಮಿತಿಯು ನಗರಾಭಿವೃದ್ಧಿ ಸಚಿವಾಲಯಕ್ಕೆ ಪತ್ರ ಬರೆದಿದ್ದು 30 ದಿನಗಳ ಒಳಗಡೆ ತನ್ನ ಅಧಿಕೃತ ನಿವಾಸವನ್ನು ಖಾಲಿ ಮಾಡುವಂತೆ ಕೇಳಿಕೊಳ್ಳುವಂತೆ ಸೂಚಿಸಿದೆ.

ಮೊಯಿತ್ರಾ ಅವರಿಗೆ ವಿಶೇಷ ಕೋಟಾದ ಅಡಿಯಲ್ಲಿ ಸಚಿವಾಲಯವು ಮನೆಯನ್ನು ಮಂಜೂರು ಮಾಡಿದೆ. ಲೋಕಸಭೆಯಿಂದ ಉಚ್ಛಾಟನೆ ಮಾಡಿದ್ದನ್ನು ಪ್ರಶ್ನಿಸಿ ಮೊಯಿತ್ರಾ ಸುಪ್ರೀಂ ಕೋರ್ಟ್‌ನಲ್ಲಿ (Suprme Court) ಅರ್ಜಿ ಸಲ್ಲಿಸಿದ್ದಾರೆ.  ನೀತಿ ಸಮಿತಿ ನೀಡಿದ ವರದಿಯ ಆಧಾರದ ಮೇಲೆ ಲೋಕಸಭೆಯಿಂದ ಮಹುವಾ ಮೊಯಿತ್ರಾ ಅವರನ್ನು ಉಚ್ಛಾಟನೆ ಮಾಡಲಾಗಿದೆ.

ಮೊಯಿತ್ರಾ ಅವರು ಸಂಸತ್ತಿನಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳುವ ಸಲುವಾಗಿ ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ 2 ಕೋಟಿ ರೂ. ನಗದು ಮತ್ತು ಐಷಾರಾಮಿ ಉಡುಗೊರೆ ವಸ್ತುಗಳು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದರು.

ಮಹುವಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸುವಂತೆ ಶಿಫಾರಸು ಮಾಡಿರುವ ವರದಿಯನ್ನು ಬಿಜೆಪಿ ಸಂಸದ ವಿನೋದ್‌ ಕುಮಾರ್‌ ಸೋನಕರ್‌ ನೇತೃತ್ವದ ನೀತಿ ಸಮಿತಿಯು ನ.9 ರಂದು ಅಂಗೀಕರಿಸಿತ್ತು ದರ್ಶನ್ ಹಿರಾನಂದಾನಿ (Darshan Hiranandani) ಅವರು ಸಂಸತ್ತಿನ ನೈತಿಕ ಸಮಿತಿಗೆ ಅಫಿಡವಿಟ್‌ ಸಲ್ಲಿಸಿ ಟಿಎಂಸಿ ಲೋಕಸಭೆ ಸಂಸದೆ ಮಹುವಾ ಮೊಯಿತ್ರಾ ಅವರು ಸಂಸತ್ತಿನ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ಅನ್ನು ಹಂಚಿಕೊಂಡಿದ್ದರು ಎಂದು ಹೇಳಿದ್ದರು.

Loading

Leave a Reply

Your email address will not be published. Required fields are marked *