ನನ್ನ ಪ್ರಕಾರ ಒಡಿಐ ಕ್ರಿಕೆಟ್ ವಿಶ್ವಕಪ್ ಟೂರ್ನಿಯೇ ಬಹುದೊಡ್ಡದು: ಸೆಹ್ವಾಗ್

ದೆಹಲಿ: ಇದೇ ವರ್ಷ ಭಾರತದ ಆತಿಥ್ಯದಲ್ಲಿ ಒಡಿಐ ವಿಶ್ವಕಪ್ ನಡೆಯಲಿದ್ದು, ಈ ಸಲುವಾಗಿ ಐಸಿಸಿ ಮಂಗಳವಾರ (ಜೂ.27) ಅಧಿಕೃತ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಅಕ್ಟೋಬರ್ 5ರಿಂದ ನವೆಂಬರ್ 15ರವರೆಗೆ ಟೂರ್ನಿ ನಡೆಯಲಿದ್ದು, ಭಾರತ ತಂಡ ಐದು ಬಾರಿಯ ವಿಶ್ವ ಚಾಂಪಿಯನ್ಸ್ ಆಸ್ಟ್ರೇಲಿಯಾ ಎದುರು ಅ.8ರಂದು ಕಾದಾಟ ನಡೆಸುವ ಮೂಲಕ ಟೂರ್ನಿಯಲ್ಲಿ ತನ್ನ ಅಭಿಯಾನ ಆರಂಭಿಸಲಿದೆ.
ಟೂರ್ನಿಯಲ್ಲಿ ಭಾರತ ತಂಡ ಗೆಲ್ಲುವ ಫೇವರಿಟ್ ತಂಡವಾಗಿ ಕಣಕ್ಕಿಳಿಯಲಿದ್ದು, ಅಕ್ಟೋಬರ್ 15ರಂದ ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಎದುರು ಪೈಪೋಟಿ ನಡೆಸಲಿದೆ. ಬರೋಬ್ಬರಿ 1 ಲಕ್ಷ, 10 ಸಾವಿರ ಆಸನ ಸಾಮರ್ಥ್ಯ ಹೊಂದಿರುವ ಜಗತ್ತಿನ ಅತಿದೊಡ್ಡ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಹೈ-ವೋಲ್ಟೇಜ್ ಪಂದ್ಯಕ್ಕೆ ಕ್ರೀಡಾಂಗಣ ಸಂಪೂರ್ಣ ಭರ್ತಿಯಾಗಲಿದೆ ಎಂದೇ ನಿರೀಕ್ಷಿಸಲಾಗಿದೆ.
2011ರಲ್ಲಿ ಭಾರತ, ಶ್ರೀಲಂಕಾ ಮತ್ತು ಬಾಂಗ್ಲಾದೇಶದ ಜಂಟಿ ಆತಿಥ್ಯದಲ್ಲಿ ಒಡಿಐ ವಿಶ್ವಕಪ್ ಟೂರ್ನಿ ಆಯೋಜನೆ ಆದ ಸಂದರ್ಭದಲ್ಲಿ ಎಂಎಸ್ ಧೋನಿ ಸಾರಥ್ಯದ ಭಾರತ ತಂಡ ಟ್ರೋಫಿ ಗೆದ್ದಿತ್ತು. ಇದೀಗ ರೋಹಿತ್ ಶರ್ಮಾ ಸಾರಥ್ಯದ ಟೀಮ್ ಇಂಡಿಯಾ ಕೂಡ ಅಂಥದ್ದೇ ಸಾಧನೆ ಮೆರೆಯಲು ಎದುರು ನೋಡುತ್ತಿದೆ. ಕಳೆದ 2 ವರ್ಷಗಳಲ್ಲಿ ನಡೆದ ಬ್ಯಾಕ್ ಟು ಬ್ಯಾಕ್ ಟಿ20 ವಿಶ್ವಕಪ್ ಟೂರ್ನಿಗಳಲ್ಲಿ ವೈಫಲ್ಯ ಕಂಡ ಭಾರತ ತಂಡ ಕಳೆದ 10 ವರ್ಷಗಳಿಂದ ಐಸಿಸಿ ಆಯೋಜಿತ ಯಾವುದೇ ಟೂರ್ನಿಗಳಲ್ಲಿ ಟ್ರೋಫಿ ಗೆದ್ದಿಲ್ಲ. ಹೀಗಾಗಿ 2023ರ ವಿಶ್ವಕಪ್ ಗೆದ್ದು ಟ್ರೋಫಿ ಗೆಲುವಿನ ಬರ ನೀಗಿಸಿಕೊಳ್ಳುವ ಲೆಕ್ಕಾಚಾರ ಮಾಡಿದೆ.
ನನ್ನ ಪ್ರಕಾರ ಒಡಿಐ ಕ್ರಿಕೆಟ್ ವಿಶ್ವಕಪ್ ಟೂರ್ನಿಯೇ ಬಹುದೊಡ್ಡದು. ನಾಣು ಒಮ್ಮೆ ಫೈನಲ್ ತಲುಪಿದ್ದೇನೆ, ಮತ್ತೊಂದು ಫೈನಲ್ನಲ್ಲಿ ಟ್ರೋಫಿ ಗೆದ್ದಿದ್ದೇನೆ. ಮತ್ತೊಂದು ವಿಶ್ವಕಪ್ನಲ್ಲಿ ಆರಂಭಿಕ ಸುತ್ತಿನಲ್ಲೇ ಸೋತ ಅನುಭವವೂ ಇದೆ. ಹೀಗಾಗಿ ನನ್ನ ಪಯಣ ಸಾಕಷ್ಟು ಏಳುಬೀಳಿನಿಂದ ಕೂಡಿತ್ತು. ನನ್ನ ಪಾಲಿನ ಅತ್ಯುತ್ತಮ ವಿಶ್ವಕಪ್ ಎಂದರೆ 2003 ಮತ್ತು 2011ರ ವಿಶ್ವಕಪ್. 2011ರಲ್ಲಿ ನಮ್ಮ ಗೆಲುವು ಅವಿಸ್ಮರಣೀಯ. ಅಲ್ಲಿಯವರೆಗೂ ಆತಿಥೇಯ ತಂಡ ವಿಶ್ವಕಪ್ ಗೆದ್ದಿರಲಿಲ್ಲ. ಹೀಗಾಗಿ ನಾವು ಗೆದ್ದು ಇತಿಹಾಸ ಬರೆಯಲೇಬೇಕೆಂಬ ಒತ್ತಡವೂ ಇತ್ತು,” ಎಂದು ಸೆಹ್ವಾಗ್ ಹೇಳಿಕೆ ನೀಡಿದ್ದಾರೆ.

Loading

Leave a Reply

Your email address will not be published. Required fields are marked *