ಬೆಂಗಳೂರು : ಕೇಂದ್ರ ಚುನಾವಣಾ ಆಯೋಗದಿಂದ ಕರ್ನಾಟಕ ವಿಧಾನಸಭೆ ಚುಣಾವಣೆಯ ಅಧಿಕೃತ ಫಲಿತಾಂಶ ಪ್ರಕಟವಾಗಿದ್ದು, 224 ವಿಧಾಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕದಲ್ಲಿ ಬಿಜೆಪಿ ಧೂಳಿಪಟವಾಗಿದೆ. 224 ಕ್ಷೇತ್ರಗಳಲ್ಲಿ ಬಿಜೆಪಿ ಕೇವಲ 66 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ ಗೆಲುವು ಕಂಡರೆ, ಜೆಡಿಎಸ್ 19 ಹಾಗೂ ಇತರು 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.