ಒಲಿಂಪಿಕ್ ಚಿನ್ನದ ಪದಕ ವಿಜೇತೆ ಟೊರಿ ಬೌವಿ ನಿಧನ

ಲಾಸ್ ಏಂಜಲೀಸ್: ಒಲಿಂಪಿಕ್ ಪದಕ ವಿಜೇತೆ ಹಾಗೂ ಅಮೆರಿಕದ ವೇಗದ ಓಟಗಾರ್ತಿ ಟೊರಿ ಬೌವಿ (32) ಹೆರಿಗೆ ಸಂದರ್ಭದಲ್ಲಿ ನಿಧನರಾಗಿದ್ದಾರೆ. ಎಂಟು ತಿಂಗಳ ಗರ್ಭಿಣಿಯಾಗಿದ್ದ ಟೊರಿ ಬೌವಿ ಫ್ಲೋರಿಡಾದ ಆರೇಂಜ್ ಕೌಂಟಿಯ ಮನೆಯಲ್ಲಿ ಒಬ್ಬರೇ ಇದ್ದರು.
ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು ಈ ವೇಳೆ ಕುಸಿದು ಬಿದ್ದಿದ್ದಾರೆ. ಆ ಸಮಯದಲ್ಲಿ ಉಸಿರಾಟದ ತೊಂದರೆ ಅನುಭವಿಸಿರಬಹುದು. ಇದರಿಂದ ಅಧಿಕ ರಕ್ತದೊತ್ತಡ ಉಂಟಾಗಿ ನಿಧನರಾಗಿರಬಹುದು ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದು ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಟೊರಿ ಮೃತಪಟ್ಟ ವೇಳೆ ಮಗು ಗರ್ಭದಿಂದ ಹೊರಬರುವ ಪ್ರಕ್ರಿಯೆಯಲ್ಲಿತ್ತು ಎಂದು ವೈದ್ಯರು ತಿಳಿಸಿದ್ದಾರೆ. ಟೊರಿ ಅವರು 2016ರ ರಿಯೊ ಒಲಿಂಪಿಕ್ನಲ್ಲಿ 4X100 ಮೀಟರ್ ರಿಲೇ ವಿಭಾಗದಲ್ಲಿ ಚಿನ್ನದ ಪದಕ ಜಯಿಸಿದ್ದರು. ಇದೇ ವೇಳೆ ಅವರು 100 ಮೀಟರ್ ಓಟದಲ್ಲಿ ಬೆಳ್ಳಿ, 200 ಮೀಟರ್ ಓಟದಲ್ಲಿ ಕಂಚು ಗೆದ್ದಿದ್ದರು.
ಟೊರಿ ನಿಧನಕ್ಕೆ ಅವರ ಕುಟುಂಬದರವು, ಅಮೆರಿಕದ ಖ್ಯಾತ ಓಟಗಾರ ಜಸ್ಟಿನ್ ಗ್ಯಾಟ್ಲಿನ್ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

Loading

Leave a Reply

Your email address will not be published. Required fields are marked *