ಬೆಂಗಳೂರು: ಹೊಸ ವರ್ಷಕ್ಕೆ ಇನ್ನೇನು 12 ದಿನಗಳು ಬಾಕಿ ಉಳಿದಿವೆ. 2023ಕ್ಕೆ ಟಾಟಾ ಹೇಳಿ 2024ನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳುವ ಕಾತುರದಲ್ಲಿ ಜನರಿದ್ದಾರೆ. ಹೊಸ ವರ್ಷದಂದು ನಗರದಾದ್ಯಂತ ಸಂಭ್ರಮ ಮನೆ ಮಾಡಲಿದೆ. ಈ ಕುರಿತಾಗಿ ಮತ್ತು ಮುನ್ನೆಚ್ಚರಿಕೆಯ ಸಲುವಾಗಿ ಬೆಂಗಳೂರು ಮಹಾನಗರ ಪಾಲಿಕೆ ಪೊಲೀಸರ ಸಾರಥ್ಯದಲ್ಲಿ ಗೈಡ್ ಲೈನ್ಸ್ ರೆಡಿ ಮಾಡಿದೆ.
ಈ ಬಾರೀ ಬೆಂಗಳೂರಿನ ನ್ಯೂ ಇಯರ್ ಹಾಟ್ ಸ್ಪಾಟ್ ಆಗಿರೋ ಎಂ.ಜಿ.ರೋಡ್,ಬ್ರಿಗೇಡ್ ರೋಡ್ ಗಳಲ್ಲಿ ಸಿಸಿಟಿವಿ ಸಂಖ್ಯೆಯನ್ನ ಕೂಡ ಹೆಚ್ಚಿಸೋಕೆ ಪೊಲೀಸ್ ಇಲಾಖೆ ಪಾಲಿಕೆಗೆ ಸೂಚನೆ ನೀಡಿದೆ. ಕಳೆದ 3 ವರ್ಷಗಳಿಂದ ಕೋವಿಡ್ ಇದ್ದ ಹಿನ್ನೆಲೆ ಕೇವಲ 200 ರಿಂದ 300ಸಿಸಿಟಿವಿ ಅಳವಡಿಕೆ ಮಾಡಲಾಗ್ತಿತ್ತು,
ಆದ್ರೆ ಈ ಬಾರೀ ಹೆಚ್ಚಿನ ಜನ ಸೇರುವ ನಿರೀಕ್ಷೆ ಇರೋದರಿಂದ ಸುಮಾರು 800 ಸಿಸಿಟಿವಿ ಅಳವಡಿಸುವಂತೆ ಪೊಲೀಸ್ ಇಲಾಖೆ ಬಿಬಿಎಂಪಿಗೆ ಸೂಚಿಸಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಇದರ ಜೊತೆಗೆ ಇನ್ನೂ ಹಲವು ರೂಲ್ಸ್ ಗಳನ್ನ ಕೂಡ ರೆಡಿಮಾಡಲಾಗಿದ್ದು , ಏನೆಲ್ಲಾ ರೂಲ್ಸ್ ಇರಲಿದೆ ಅನ್ನೋದನ್ನ ನೋಡೋದಾದ್ರೆ
ನ್ಯೂ ಇಯರ್ ಗೆ ಏನೆಲ್ಲಾ ರೂಲ್ಸ್?
- ರಾತ್ರಿ 1 ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಸಬೇಕು
- ಎಂ.ಜಿ.ರಸ್ತೆ,ಬ್ರಿಗೇಡ್ ರಸ್ತೆ, ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ
- ರಾತ್ರಿ 10 ಗಂಟೆ ಬಳಿಕ ಪ್ರಮುಖ ಫ್ಲೈ ಓವರ್ ಗಳು ಬಂದ್
- ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 800ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ
- ರಾತ್ರಿ 8 ಗಂಟೆ ಬಳಿಕ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್
- ಸೆಲೆಬ್ರೇಷನ್ ಗೆ ಬರುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ
- ಮಹಿಳೆಯರ ಸುರಕ್ಷತೆಗಾಗಿ ಮಹಿಳಾ ಪೊಲೀಸರ ನಿಯೋಜನೆ
- ಬಾರ್, ಪಬ್ ಗಳಿಗೂ ರಾತ್ರಿ 1 ಗಂಟೆ ಬಳಿಕ ಬಂದ್ ಗೆ ಸೂಚನೆ
- ನಗರದ ವಿವಿಧ ಭಾಗಗಳಲ್ಲಿ ಆಚರಣೆಗೆ ಅನುಮತಿ ಕಡ್ಡಾಯ