ಚಿಕ್ಕೋಡಿ: ಮತ್ತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಆಪರೇಷನ್ ಹಸ್ತದ ಮೂಲ ಉದ್ದೇಶ ಏಕೆ ಶುರುವಾಯ್ತು ಕೇಳಿ ಎಂದರು. ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ 25 ರಿಂದ 30 ಹಿರಿಯ ಶಾಸಕರು ಮುಂದಿನ ನಿರ್ಣಯಕ್ಕೆ ಸೇರುವವರಿದ್ದರು. ಅದನ್ನ ಮರೆಮಾಚಲು ಈಗ ಮಹಾ ನಾಯಕ ಮಾಡಿದ ಕುತಂತ್ರವಾಗಿದೆ. ಇದು ಆಪರೇಷನ್ ಹಸ್ತ ಅಲ್ಲ, ನನಗೆ ಎಲ್ಲ ಗೊತ್ತಿದೆ.
ಅವರ ಪಕ್ಷದಲ್ಲಿ 25 ರಿಂದ 30 ಶಾಸಕರು ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ನಲ್ಲಿ ಸೇರುವವರಿದ್ದರು. ಆಪರೇಷನ್ ಹಸ್ತ ಅಂತಾ ಪೋಸ್ ಕೊಡುವ ನಾಯಕ ತನ್ನ ಪಕ್ಷಕ್ಕೆ ಅವಮಾನ ಆಗುತ್ತೆ ಅಂತಾ ನಾಟಕವಾಡುತ್ತಿದ್ದಾರೆ. ಸಿಎಂಗೆ ಪತ್ರ ಬರೆದು ಬಳಿಕ ಎಲ್ಲರೂ ಸೇರುವವರಿದ್ದರು. ಅವರು ಹೆದರಲಿ, ಅವರು ಬಿಜೆಪಿಗೆ ಬರುತ್ತಿದ್ದಾರೆ ಎಂದು ಈಗ ನಾಟಕ ಮಾಡುತ್ತಿದ್ದಾರೆ. ಆಪರೇಷನ್ ಹಸ್ತ ಮಾಡೋರು ಮೂರ್ಖರು, ಹೋಗೋರು ಮೂರ್ಖರು ಎಂದರು.