ಅಯೋಧ್ಯೆ: ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರ ಸಾರಥ್ಯದಲ್ಲಿ ಶಾಸ್ತ್ರೋಕ್ತವಾಗಿ ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆಯಾಗಿದೆ. ಇಂದು ಸಾವರ್ಜನಿಕರ ದರ್ಶನಕ್ಕೆ ಅನುಮತಿ ನೀಡಲಾಯಿತು. ಸಾರ್ವಜನಿಕರಿಗೆ ರಾಮಮಂದಿರದಲ್ಲಿ ಬಾಲರಾಮನ ದರ್ಶನಕ್ಕೆ ಅವಕಾಶ ನೀಡುತ್ತಿದ್ದಂತೆಯೇ ಭಕ್ತರ ದಂಡೇ ಹರಿದು ಬರಲಾರಂಭಿಸಿದೆ. ಸೋಮವಾರ ರಾತ್ರಿಯಿಂದಲೇ ಅಯೋಧ್ಯಾಧಾಮದಲ್ಲಿ ಭಕ್ತರು ಸಾಲುಗಟ್ಟಿ ನಿಂತಿದ್ದಾರೆ. ಅಲ್ಲದೇ ತೀವ್ರ ಚಳಿಯನ್ನೂ ಲೆಕ್ಕಿಸದೇ ದೇವಸ್ಥಾನದ ಹೊರಗಡೆಯೂ ಸಾವಿರಾರು ಜನ ಜಮಾಯಿಸತೊಡಗಿದರು.
ತಡರಾತ್ರಿಯಿಂದಲೇ ರಾಮ ಮಂದಿರದ ಮುಖ್ಯ ದ್ವಾರದ ಹೊರಗೆ ಭಕ್ತಾದಿಗಳ ಉದ್ದನೆಯ ಸಾಲು ಆರಂಭವಾಗಿತ್ತು. ಬೆಳಗ್ಗಿನ ಜಾವ 2 ಗಂಟೆಯಿಂದಲೇ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಲಾರಂಭಿಸಿದರು. ನೆರೆದಿದ್ದ ಜನರು ದ್ವಾರದ ಮುಂದೆ ʼಜೈ ಶ್ರೀ ರಾಮ್ʼ ಎಂದು ಘೋಷಣೆ ಕೂಗುತ್ತಾ ದೇಗುಲದೊಳಗೆ ಪ್ರವೇಶಿಸುತ್ತಿದ್ದಾರೆ.