ಬೆಂಗಳೂರು: ವಿಪಕ್ಷ ನಾಯಕ, ರಾಜ್ಯಾಧ್ಯಕ್ಷರ ಹೆಸರು ಇಂದೇ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಯಾರಾಗಬೇಕು ಅಂತಾ ಕೇಂದ್ರದ ನಾಯಕರು ಬಂದು ಅಭಿಪ್ರಾಯ ತೆಗೆದುಕೊಂಡು ಹೋಗಿದ್ದಾರೆ. ಬಹುಶಃ ಇವತ್ತು ಅಮಿತ್ ಷಾ, ಪ್ರಧಾನಿ ಮೋದಿ ಅವರ ಜೊತೆ ಚರ್ಚೆ ನಡೆಸಿ ತೀರ್ಮಾನಕ್ಕೆ ಬರಬಹುದು ಅಂತ ನಾವೆಲ್ಲಾ ಭಾವಿಸಿದ್ದೇವೆ. ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ನೋಡೋಣ. ಅವರ ತೀರ್ಮಾನವನ್ನು ಸ್ವಾಗತಿಸುತ್ತೇವೆ ಎಂದು ಹೇಳಿದರು. ಬಹುಶಃ ಇವತ್ತು ಘೋಷಣೆ ಆಗಬಹುದು