ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದು, ಪ್ರತಿಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಯಿತು. ಬಜೆಟ್ ಅನ್ನು ಕೇಂದ್ರದ ವಿರುದ್ಧ ಟೀಕೆಗೆ ಬಳಸಿಕೊಳ್ಳುತ್ತೀರಾ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಕಿಡಿ ಕಾರಿದರು. ಈ ವೇಳೆ ಗದ್ದಲದ ವಾತಾವರಣ ಸೃಷ್ಟಿಯಾಯಿತು. ಸ್ಪೀಕರ್ ಯುಟಿ ಖಾದರ್ ಪರಿಪರಿಯಾಗಿ ಬೇಡಿಕೊಂಡರೂ ಪ್ರತಿಪಕ್ಷ ನಾಯಕರು ಆಕ್ರೋಶದ ಮಾತುಗಳನ್ನು ಕಡಿಮೆ ಮಾಡಲಿಲ್ಲ.