ಬೆಂಗಳೂರು: ತಾಂತ್ರಿಕ ದೋಷದಿಂದ ಪೀಣ್ಯ ನಿಲ್ದಾಣದಲ್ಲಿ (Peenya Metro Station) ಮೆಟ್ರೋ ರೈಲು ಕೆಟ್ಟು ನಿಂತಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆ.ಸದ್ಯ ಯಶವಂತಪುರ – ಸಿಲ್ಕ್ ಇನ್‌ಸ್ಟಿಟ್ಯೂಟ್ ವರೆಗೆ ಮಾತ್ರ ಮೆಟ್ರೋ ಸಂಚಾರ ನಡೆಸುತ್ತಿದ್ದು ಪೀಣ್ಯ – ನಾಗಸಂದ್ರ ರೈಲು ಸಂಚಾರ ಸ್ಥಗಿತಗೊಂಡಿದೆ. ಮುಂದಿನ 2 ಗಂಟೆಯ ಒಳಗಡೆ ತಾಂತ್ರಿಕ ದೋಷವನ್ನು ಸರಿಪಡಿಸಲಾಗುವುದು ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.