ಡೆಹ್ರಾಡೂನ್: ಬಸ್ (Bus) ಕಮರಿಗೆ ಉರುಳಿದ ಪರಿಣಾಮ 7 ಮಂದಿ ಸಾವಿಗೀಡಾಗಿ, 27 ಜನ ಗಾಯಗೊಂಡ ಘಟನೆ ಉತ್ತರಾಖಂಡದ (Uttarakhand) ಉತ್ತರಕಾಶಿಯಲ್ಲಿ ನಡೆದಿದೆ. ಬಸ್ ಗುಜರಾತ್ನಿಂದ (Gujarat) ಯಾತ್ರಾರ್ಥಿಗಳನ್ನು ಹೊತ್ತು ಗಂಗೋತ್ರಿಯಿಂದ ವಾಪಾಸ್ ಆಗುತ್ತಿತ್ತು. ಈ ವೇಳೆ ದುರಂತ ಸಂಭವಿಸಿದೆ. ಪರಿಣಾಮ ಸ್ಥಳದಲ್ಲೇ 7 ಮಂದಿ ಸಾವಿಗೀಡಾಗಿದ್ದಾರೆ. ಬಸ್ನಲ್ಲಿ 35 ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ.
ಈ ಬಗ್ಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಯವರು ಪ್ರತಿಕ್ರಿಯಿಸಿದ್ದು, ರಕ್ಷಣಾ ಕಾರ್ಯಕ್ಕೆ ಸೂಚಿಸಿದ್ದಾರೆ.
ಅಲ್ಲದೇ ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ವೈದ್ಯಕೀಯ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಅಗತ್ಯ ಸಂದರ್ಭದಲ್ಲಿ ನೆರವು ನೀಡಲು ಡೆಹ್ರಾಡೂನ್ನಲ್ಲಿ ಹೆಲಿಕಾಪ್ಟರ್ ನಿಯೋಜಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರಾಖಂಡ ನಿರಂತರ ಮಳೆಯಿಂದ (Rain) ತತ್ತರಿಸಿದ್ದು, ಹಲವೆಡೆ ಭೂಕುಸಿತ ಮತ್ತು ಹಠಾತ್ ಪ್ರವಾಹಕ್ಕೆ ಗುರಿಯಾಗುತ್ತಿದೆ. ಇದರ ನಡುವೆಯೇ ಮಳೆಯ ಕಾರಣದಿಂದ ವಾಹನಗಳು ಕಮರಿಗೆ ಉರುಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ.