ಬೆಳಗಾವಿ: ಯಾವುದೇ ವದಂತಿಗೆ ದಯಮಾಡಿ ಯಾರೂ ಕಿವಿಗೊಡಬೇಡಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು..ಬೆಳಗಾವಿ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬೆಲೆ ಏರಿಕೆಯಿಂದ ತತ್ತರಿಸಿದ ನಿಮಗೆ ಆಶಾಕಿರಣ ಮೂಡಿಸಿದ್ದು ಕಾಂಗ್ರೆಸ್.
ಕಾಂಗ್ರೆಸ್ ಕೊಟ್ಟ ಭರವಸೆಯನ್ನು ಈಡೇರಿಸುತ್ತದೆ. ಮನೆ ಮಾಲೀಕರು, ಬಾಡಿಗೆದಾರರಿಗೆ ಯಾವುದೇ ಆತಂಕ ಬೇಡ. ಇನ್ನು ಅಧಿಕಾರಿಗಳು, ಮಂತ್ರಿಗಳ ಹಂತದಲ್ಲಿ ಎಲ್ಲಾ ಯೋಜನೆಗಳ ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದರು.
ಗೃಹಜ್ಯೋತಿ ಯೋಜನೆಯಿಂದ ಬಾಡಿಗೆದಾರರು ವಂಚಿತರಾಗುವ ಆತಂಕ ವ್ಯಕ್ತವಾಗುತ್ತಿರುವ ವಿಚಾರವಾಗಿ ಮಾತನಾಡಿದ ಅವರು ಯಾವುದೇ ವದಂತಿಗೆ ದಯಮಾಡಿ ಯಾರೂ ಕಿವಿಗೊಡಬೇಡಿ. ಬೆಲೆ ಏರಿಕೆಯಿಂದ ತತ್ತರಿಸಿದ ನಿಮಗೆ ಆಶಾಕಿರಣ ಮೂಡಿಸಿದ್ದು ಕಾಂಗ್ರೆಸ್. ಕಾಂಗ್ರೆಸ್ ಕೊಟ್ಟ ಭರವಸೆಯನ್ನು ಈಡೇರಿಸುತ್ತದೆ. ಮನೆ ಮಾಲೀಕರು, ಬಾಡಿಗೆದಾರರಿಗೆ ಯಾವುದೇ ಆತಂಕ ಬೇಡ. ಇನ್ನು ಅಧಿಕಾರಿಗಳು, ಮಂತ್ರಿಗಳ ಹಂತದಲ್ಲಿ ಎಲ್ಲಾ ಯೋಜನೆಗಳ ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದರು.
ಮನೆಮಾಲೀಕರು ಹಾಗೂ ಬಾಡಿಗೆದಾರರು ಒಂದೇ ಆರ್‌ಆರ್ ನಂಬರ್ ಹೊಂದಿದ್ದರೇ ಹೇಗೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಈ ಬಗ್ಗೆ ಜಾಸ್ತಿ ಬೆಳಕನ್ನು ಚೆಲ್ಲುತ್ತಾರೆ. ಗೃಹಲಕ್ಷ್ಮೀ ಸಂಪೂರ್ಣ ಮಾಹಿತಿ ನಾನು ಮಾತನಾಡುವುದು. ತಾವು ಈ ವಿಷಯ ನನ್ನ ಗಮನಕ್ಕೆ ತಂದಿದ್ದೀರಿ ಅವರ ಜೊತೆ ಚರ್ಚೆ ಮಾಡುವೆ ಎಂದು ಹೇಳಿದ್ದಾರೆ.