ಮನಮೋಹನ್ ಸಿಂಗ್ ಕೆಲಸದ ಕುರಿತು ಹೊಗಳಿದ ಪ್ರಧಾನಿ ಮೋದಿ

ನವದೆಹಲಿ: ನಾನು ಇಂದು ಮನಮೋಹನ್‌ ಸಿಂಗ್‌ ಅವರನ್ನು ಸ್ಮರಿಸುತ್ತೇನೆ. ಅವರ ಕೊಡುಗೆ ಅಪಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರನ್ನು ಹಾಡಿ ಹೊಗಳಿದ್ದಾರೆ. ನಿವೃತ್ತರಾಗಲಿರುವ ರಾಜ್ಯಸಭಾ ಸದಸ್ಯರ ಬೀಳ್ಕೊಡುಗೆ ಸಂದರ್ಭದಲ್ಲಿ ಸದನವನ್ನುದ್ದೇಶಿಸಿ ಮಾತನಾಡಿದ ಮೋದಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೇಶಕ್ಕೆ ಸಲ್ಲಿಸಿದ ಕೊಡುಗೆ ಹಾಗೂ ಪ್ರಜಾಪ್ರಭುತ್ವದ ಬಗ್ಗೆ ಅವರಿಗಿರುವ ಬದ್ಧತೆಯನ್ನು ಶ್ಲಾಘಿಸಿದರು.

ನಾನು ಇಂದು ಮನಮೋಹನ್‌ ಸಿಂಗ್‌ ಅವರನ್ನು ಸ್ಮರಿಸುತ್ತೇನೆ. ಅವರ ಕೊಡುಗೆ ಅಪಾರವಾಗಿದೆ. ಡಾ.ಮನಮೋಹನ್ ಸಿಂಗ್ ಅವರು ಇಷ್ಟು ದಿನ ಈ ಸದನ ಮತ್ತು ದೇಶಕ್ಕೆ ಮಾರ್ಗದರ್ಶನ ನೀಡಿದ ರೀತಿ ಸದಾ ನೆನಪಿನಲ್ಲಿ ಉಳಿಯುತ್ತದೆ ಎಂದರು. ಸದನದಲ್ಲಿ ಮತದಾನದ ವೇಳೆ ಆಡಳಿತ ಪಕ್ಷವೇ ಗೆಲ್ಲುತ್ತದೆ ಎಂದು ಗೊತ್ತಿದ್ದರೂ ಡಾ.ಮನಮೋಹನ್ ಸಿಂಗ್ ವ್ಹೀಲ್‌ ಚೇರ್‌ನಲ್ಲಿ ಬಂದು ಮತ ಚಲಾಯಿಸಿದ್ದು ಕೂಡ ನನಗೆ ಚೆನ್ನಾಗಿ ನೆನಪಿದೆ.

ಅವರು ಯಾರಿಗೆ ಅಧಿಕಾರ ಕೊಡಲು ಬಂದಿದ್ದರು ಎಂಬುದು ಪ್ರಶ್ನೆಯಲ್ಲ. ಅವರು ಪ್ರಜಾಪ್ರಭುತ್ವಕ್ಕೆ ಶಕ್ತಿ ನೀಡಲು ಬಂದಿದ್ದರು ಎಂದು ನಾನು ನಂಬುತ್ತೇನೆ ಎಂದಿದ್ದಾರೆ. ಸದಸ್ಯರು ತಮ್ಮ ಕರ್ತವ್ಯಗಳ ಬಗ್ಗೆ ಎಚ್ಚರವಾಗಿರುವುದಕ್ಕೆ ಇದು ಒಂದು ಉತ್ತಮ ಉದಾಹರಣೆಯಾಗಿದೆ. ಅಲ್ಲದೇ ಮನಮೋಹನ್ ಸಿಂಗ್ ಎಲ್ಲ ಸಂಸದರಿಗೆ ಸ್ಫೂರ್ತಿ ಎಂದು ಮೋದಿ ಬಣ್ಣಿಸಿದರು.

 

Loading

Leave a Reply

Your email address will not be published. Required fields are marked *