ಎರಡೂ ರಾಜ್ಯಗಳ ನಾಯಕರನ್ನು ಪ್ರಧಾನಿ ಕರೆದು ಮಾತಾಡಬೇಕು: ಸಿಎಂ ಸಿದ್ದರಾಮಯ್ಯ

ವದೆಹಲಿ: ಸಭೆಯಲ್ಲಿ ಎಲ್ಲ ಪಕ್ಷದ ಸಂಸದರು, ಕೇಂದ್ರ ಸಚಿವರು ಭಾಗಿಯಾಗಿದ್ದರು. ಅನ್ಯ ಕೆಲಸ ಹಿನ್ನೆಲೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಭೆಗೆ ಬಂದಿರಲಿಲ್ಲ. ರಾಜ್ಯದಲ್ಲಿ ಮಳೆ ಕೊರತೆಯಿಂದ ಡ್ಯಾಮ್ಗಳಲ್ಲಿ ನೀರು ಇಲ್ಲ. 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದೇವೆ. 123 ವರ್ಷಗಳಲ್ಲಿ ಎಂದೂ ಇಷ್ಟು ಮಳೆ ಕೊರತೆ ಆಗಿರಲಿಲ್ಲ. ಕಾವೇರಿ ನೀರಿನ ಬಗ್ಗೆ ಹಿಂದೆ ಸುಪ್ರೀಂಕೋರ್ಟ್ ಆದೇಶ ಇದೆ. ರಾಜ್ಯದ ಕಾವೇರಿ ನದಿ ನೀರು ವಿಚಾರದಲ್ಲಿ ಸಂಕಷ್ಟ ಸೂತ್ರ ಅಗತ್ಯ. ಸಂಕಷ್ಟದ ಪರಿಸ್ಥಿತಿಯಲ್ಲಿ ಎಷ್ಟು ನೀರು ಬಿಡಬೇಕಿಂದು ತಿಳಿಸಿಲ್ಲ.

ಸಂಕಷ್ಟದ ಸೂತ್ರ ಏನು ಅನ್ನೋದು ತಯಾರಿಯಾಗಿಲ್ಲ. ಮಳೆ ಸಾಮಾನ್ಯವಾಗಿದ್ದರೆ 108 ಟಿಎಂಸಿ ನಾವು ಕೊಡಬೇಕಿತ್ತು. ಮುಂದೆ ಮಳೆ ಬರುವ ಆಶಾದಾಯಕವಾಗಿಲ್ಲ. ಮಳೆ ಕೊರತೆಯಿಂದ ನಾವು ಕಷ್ಟದಲ್ಲಿ ಇದ್ದೇವೆ. ಎರಡೂ ರಾಜ್ಯಗಳ ನಾಯಕರನ್ನು ಪ್ರಧಾನಿ ಕರೆದು ಮಾತಾಡಬೇಕು. ಕೇಂದ್ರ ಜಲಸಂಪನ್ಮೂಲ ಸಚಿವರ ಭೇಟಿಗೆ ಸಮಯ ಕೇಳಲಾಗಿದೆ. ನಾಳೆ ಸುಪ್ರೀಂಕೋರ್ಟ್ಗೆ ನೀರು ಇಲ್ಲವೆಂದು ಅರ್ಜಿ ಹಾಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Loading

Leave a Reply

Your email address will not be published. Required fields are marked *