ಪೋಕ್ಸೋ ಕೇಸ್: 14 ತಿಂಗಳಿನಿಂದ ಜೈಲಿನಲ್ಲಿದ್ದ ಮುರುಘಾಶ್ರೀ ಬಿಡುಗಡೆ

ಚಿತ್ರದುರ್ಗ: ಕಳೆದ 14 ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾ ಮಠದ ಶಿವಮೂರ್ತಿ ಶರಣರು ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮುರುಘಾ ಶ್ರೀಗಳಿಗೆ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಮುರುಘಾ ಶ್ರೀ ವಿರುದ್ಧ ಎರಡು ಪೋಕ್ಸೋ ಪ್ರಕರಣ ದಾಖಲಾಗಿತ್ತು. ನ.8 ರಂದು ಒಂದು ಪ್ರಕರಣದಲ್ಲಿ ಜಾಮೀನು ಸಿಕ್ಕಿದ್ದರೂ ಎರಡನೇ ಪೋಕ್ಸೋ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ಬಾಕಿಯಿದ್ದ ಹಿನ್ನೆಲೆಯಲ್ಲಿ ಬಿಡುಗಡೆಯಾಗಿರಲಿಲ್ಲ. ಜಾಮೀನು ಆದೇಶ ನೀಡುವ ಚಿತ್ರದುರ್ಗದಲ್ಲಿ ನೆಲೆಸುವಂತಿಲ್ಲ ಎಂದು ಕೋರ್ಟ್‌ ಷರತ್ತು ವಿಧಿಸಿದ ಹಿನ್ನಲೆಯಲ್ಲಿ ಶ್ರೀಗಳು ಜೈಲಿನಿಂದ ಬಿಡುಗಡೆಯಾದ ಬಳಿಕ  ದಾವಣಗೆರೆ ಕಡೆ ಹೊರಟಿದ್ದಾರೆ.

ವಿಚಾರಣೆ ಮುಗಿಯುವವರೆಗೂ ಚಿತ್ರದುರ್ಗಕ್ಕೆ ಹೋಗುವಂತಿಲ್ಲ. ಇಬ್ಬರ ಶ್ಯೂರಿಟಿಯನ್ನು ಒದಗಿಸಬೇಕು. ವೀಡಿಯೊ ಕಾನ್ಫರೆನ್ಸ್ ಮೂಲಕ ಕೋರ್ಟ್ ವಿಚಾರಣೆಗೆ ಹಾಜರಾಗಬೇಕು. ಎರಡು ಲಕ್ಷ ರೂ. ಬಾಂಡ್ ಶ್ಯೂರಿಟಿ ನೀಡಬೇಕು. ಪಾಸ್‌ಪೋರ್ಟ್‌ ಅನ್ನು ಕೋರ್ಟ್‌ ವಶಕ್ಕೆ ನೀಡಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಇಂತಹ ಕೃತ್ಯ ಪುನರಾವರ್ತನೆಯಾಗಬಾರದು ಎಂದು ಷರತ್ತು ವಿಧಿಸಿದೆ.

Loading

Leave a Reply

Your email address will not be published. Required fields are marked *