ಆಕ್ಷೇಪಾರ್ಹ ಪದ ಬಳಕೆ ಮಾಡಿದ ನಟ ಉಪೇಂದ್ರ ಅವರಿಗೆ ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ನೋಟಿಸ್ ಜಾರಿ ಮಾಡಿದ್ದಾರೆ. ತಕ್ಷಣ ವಿಚಾರಣೆಗೆ ಹಾಜರಾಗುಂತೆ ಉಪೇಂದ್ರ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಆಕ್ಷೇಪಾರ್ಹ ಪದ ಬಳಕೆ ಮಾಡಿ ಮಾತನಾಡಿದ್ದ ಆರೋಪದ ಮೇಲೆ ಉಪೇಂದ್ರ ವಿರುದ್ಧ. ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲು ಆಗಿತ್ತು.
ದೂರುದಾರ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಧುಸೂದನ್ ಸಮ್ಮುಖದಲ್ಲಿ ಉಪೇಂದ್ರ ಮನೆ ಮಹಜರ್ ಮಾಡಲಿದ್ದು, ಇಂದು ಕತ್ರಿಗುಪ್ಪೆ ಮನೆಯಲ್ಲಿ ಪೊಲೀಸರು ಮಹಜರ್ ಮಾಡಲಿದ್ದಾರೆ. ಉಪೇಂದ್ರ ಕತ್ರಿಗುಪ್ಪೆ ಮನೆಯಲ್ಲಿ ಕೂತು ವಿಡಿಯೋ ಮಾಡಿರೋ ಹಿನ್ನಲೆ ಕತ್ರಿಗುಪ್ಪೆ ಮನೆ ಮಹಜರ್ ಮಾಡಲಿದ್ದಾರೆ.
ನಿನ್ನೆಯಷ್ಟೇ ಸ್ಯಾಂಡಲ್ವುಡ್ ನಟ ಉಪೇಂದ್ರ ಮೇಲೆ ಎಫ್ಐಆರ್ ದಾಖಲಾಗಿತ್ತು. ಸಮುದಾಯವೊಂದನ್ನು ನಿಂದಿಸಿದ ಆರೋಪದ ಮೇಲೆ ಉಪೇಂದ್ರ ವಿರುದ್ಧ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂದನ್ ಅವರು ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದರು.