ಶಿವಮೊಗ್ಗ: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಗಲಾಟೆ ಸಂಬಂಧ ಪೊಲೀಸರು ಈವರೆಗೆ 24 FIR ದಾಖಲಿಸಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಗಲಾಟೆ ಸಂದರ್ಭದಲ್ಲಿ ಗಂಭೀರ ಆಗಿಲ್ಲ, ಸಣ್ಣಪುಟ್ಟ ಗಾಯಗಳಾಗಿವೆ. ಈ ಘಟನೆಯಲ್ಲಿ ಯಾರೇ ಭಾಗಿಯಾಗಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ. ಪ್ರಕರಣ ಸಂಬಂಧ ಸಂಪೂರ್ಣ ಮಾಹಿತಿ ಕಲೆ ಹಾಕುತ್ತೇವೆ. ಗಲಾಟೆಯಲ್ಲಿ ಭಾಗಿಯಾದ ಯಾರನ್ನೂ ಬಿಡಲ್ಲ. ಕಾನೂನು ಎಲ್ಲರಿಗೂ ಒಂದೇ, ಎಲ್ಲರಿಗೂ ಒಂದೇ ರೀತಿ ಶಿಕ್ಷೆ ಆಗುತ್ತದೆ ಎಂದರು.