ಹುಬ್ಬಳ್ಳಿ: ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಅವರ ಜನ್ಮದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ ಮೂಲಕ ಶುಭ ಕೋರಿದ್ದಾರೆ.
‘ಆರ್ಥಿಕ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುವ ಕಲ್ಲಿದ್ದಲು ಮತ್ತು ಗಣಿ ಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸುವಲ್ಲಿ ಪ್ರಲ್ಹಾದ ಜೋಶಿ ಅವರು ಸಾಕಷ್ಟು ಪರಿಶ್ರಮ ಪಡುತ್ತಿದ್ದಾರೆ. ಇದಲ್ಲದೇ, ಸಂಸತ್ ಕಲಾಪಗಳು ಸುಗಮವಾಗಿ ಹಾಗೂ ಅರ್ಥಪೂರ್ಣವಾಗಿ ನಡೆಯಲು ಅವರ ಶ್ರಮವೂ ಗಮನಾರ್ಹವಾದುದು. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಶುಭಾಶಯ ಕೋರಿದ್ದಾರೆ.