ಸುಳ್ಯ;– ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ತನಿಖಾಧಿಕಾರಿಗಳು ಕೊಟ್ಟ ಗಡುವು ಕೊನೆಗೂ ಅಂತ್ಯವಾಗಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ಜೂ.30ರೊಳಗೆ ಶರಣಾಗಬೇಕು, ಇಲ್ಲವೇ ಆರೋಪಿಗಳ ಮನೆ, ಆಸ್ತಿ ಮುಟ್ಟುಗೋಲು ಹಾಕುವುದಾಗಿ ಸೂಚನೆ ನೀಡಲಾಗಿತ್ತು.
ಜತೆಗೆ ಧ್ವನಿವರ್ಧಕದ ಮೂಲಕ ಉದ್ಘೋಷಣೆ ಮಾಡಿದ್ದಲ್ಲದೆ, ಆರೋಪಿಗಳ ಮನೆಗಳಲ್ಲೂ ಭಿತ್ತಿಪತ್ರ ಹಚ್ಚುವ ಮೂಲಕ ಮಾಹಿತಿ ನೀಡಲಾಗಿತ್ತು. ಆದರೆ ಆರೋಪಿಗಳು ಶರಣಾಗಿಲ್ಲ ಎಂದು ತಿಳಿದುಬಂದಿದೆ.
ತಲೆಮರೆಸಿಕೊಂಡಿಕೊಂಡುವ ಆರೋಪಿಗಳ ಆಸ್ತಿ ಜಪ್ತಿ ಮಾಡಬಹುದು ಎನ್ನಲಾಗಿದ್ದರೂ ಇದಕ್ಕೂ ಸಮಯ ತಗಲುತ್ತದೆ. ಆರೋಪಿಯ ಹೆಸರಿನಲ್ಲಿರುವ ಚರಾಸ್ತಿ ಹಾಗೂ ಸ್ಥಿರಾಸ್ತಿಗಳ ಮಾಹಿತಿಯನ್ನು ಎನ್‌ಐಎ ಅಧಿಕಾರಿಗಳು ಕಂದಾಯ ಇಲಾಖೆ, ಬ್ಯಾಂಕ್‌ಗಳು ಮತ್ತಿತರ ಮೂಲಗಳಿಂದ ಸಂಗ್ರಹಿಸಿ, ಆರೋಪಿಗಳ ಹೆಸರಿನಲ್ಲಿರುವ ಆಸ್ತಿಗಳ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ, ಬಳಿಕ ಆರೋಪಿಯದ್ದೇ ಆಸ್ತಿ ಎಂದು ದೃಢೀಕರಣಗೊಂಡಲ್ಲಿ ಮುಟ್ಟುಗೋಲು ಹಾಕಿಕೊಂಡು ಸರಕಾರದ ವಶಕ್ಕೆ ಪಡೆಯಯಬಹುದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.