ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಆರೋಗ್ಯ ಇಲಾಖೆ ವೈದ್ಯ ಡಾ.ಅಭಿಷೇಕ್ ಯಡವಟ್ಟು ಮಾಡಿರುವ ದೃಶ್ಯ ವೈರಲ್ ಆಗಿದೆ. ಭರಮಸಾಗರ ಸರ್ಕಾರಿ ಆಸ್ಪತ್ರೆಯ ವೈಧ್ಯ ಡಾ.ಅಭಿಷೇಕ್ ಅಪರೇಷನ್ ಥಿಯೇಟರ್ ನಲ್ಲಿ ಪ್ರೀವೆಡ್ಡಿಂಗ್ ವಿಡಿಯೋ ಶೂಟ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ನಡೆದಿದೆ.
ವ್ಯಕ್ತಿಗೆ ಆಪರೇಷನ್ ಮಾಡುತ್ತಿರುವಂತೆ ಮದುವೆ ಆಗುವ ಯುವತಿ ಜೊತೆ ಫೋಟೋ ಶೂಟ್ ಮಾಡಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು, ಡಾ.ಅಭಿಷೇಕ್ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ದುರ್ಬಳಕೆ ಮಾಡಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.