ಬೆಂಗಳೂರು: ನಮ್ಮ ಮೆಟ್ರೋ ವಿಸ್ತೃತ ಮಾರ್ಗವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಈ ಕುರಿತು ರಾಜ್ಯ ಹಾಗೂ ಬೆಂಗಳೂರು ಜನತೆ ಪರವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಅವರಿಗೆ ಧನ್ಯವಾದ ತಿಳಿಸಿದರು.
ಈ ವೇಳೆ ಮಾತನಾಡಿದ ಅವರು ‘ನೂತನ ಮೆಟ್ರೋ ಮಾರ್ಗದಿಂದ ಜನರಿಗೆ ಮತ್ತಷ್ಟು ಅನುಕೂಲವಾಗಲಿದೆ. ಮೆಟ್ರೋ ಮಾರ್ಗಕ್ಕೆ ರಾಜ್ಯ ಸರ್ಕಾರ 5,630 ಕೋಟಿ ರೂ. ನೀಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಂಟಿಯಾಗಿ ಮೆಟ್ರೋ ಯೋಜನೆ ಕೈಗೊಂಡಿದೆ. ಎರಡು ಹಂತದಲ್ಲಿ ಸುಮಾರು 74 ಕಿ.ಮೀ. ಮೆಟ್ರೋ ಮಾರ್ಗ ವಿಸ್ತರಣೆ ಮಾಡಲಾಗಿದೆ ಎಂದರು.