ಕಾರ್ಮಿಕರಿಗೆ ಶಾಲು ಹೊದಿಸಿ ಸನ್ಮಾನಿಸಿದ ಪ್ರಧಾನಿ ಮೋದಿ!

ವದೆಹಲಿ: ನೂತನ ಸಂಸತ್ ಭವನದ ಕಟ್ಟಡ ಮತ್ತು ಅಭಿವೃದ್ಧಿಯಲ್ಲಿ ಕೆಲಸ ಮಾಡಿದ ಕಾರ್ಮಿಕರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸನ್ಮಾನಿಸಿದರು.

ನೂತನ ಸಂಸತ್ ಭವನದ ಉದ್ಘಾಟನೆಗೂ ಮುನ್ನ ಪ್ರಧಾನಿ ಮೋದಿ ಅವರು ಕಟ್ಟಡ ಕಾರ್ಮಿಕರಿಗೆ ಸಾಂಪ್ರದಾಯಿಕ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು.

 

ಇದಕ್ಕೂ ಮೊದಲು, ಪ್ರಧಾನಿ ಮೋದಿ ಅವರು ಪೂಜೆ ಸಲ್ಲಿಸಿದ ನಂತರ ಹೊಸ ಲೋಕಸಭೆಯ ಸಭಾಂಗಣದಲ್ಲಿ ಸ್ಪೀಕರ್ ಕುರ್ಚಿಯ ಪಕ್ಕದಲ್ಲಿ ಪವಿತ್ರ ‘ಸೆಂಗೊಲ್’ ಅನ್ನು ಸ್ಥಾಪಿಸಿದರು.

ಹೊಸ ಸಂಸತ್ತಿನ ಕಟ್ಟಡದಲ್ಲಿ ಸ್ಥಾಪಿಸುವ ಮೊದಲು ಐತಿಹಾಸಿಕ ‘ಸೆಂಗೊಲ್’ ಅನ್ನು ಅಧೀನಮ್‌ಗಳು ಹಸ್ತಾಂತರಿಸಿದರು. ಅಮೃತ ಕಾಲದ ರಾಷ್ಟ್ರೀಯ ಸಂಕೇತವಾಗಿ ‘ಸೆಂಗೊಲ್’ ಅನ್ನು ಸ್ಥಾಪಿಸಲಾಯಿತು. ‘ಸೆಂಗೊಲ್’ ಸ್ಥಾಪನೆಯ ನಂತರ, ಪ್ರಧಾನಮಂತ್ರಿಯವರು ತಮಿಳುನಾಡಿನ ವಿವಿಧ ಅಧೀನರ ಆಶೀರ್ವಾದವನ್ನೂ ಪಡೆದರು.

ಇದೇ ಸೆಂಗೋಲ್ ಅನ್ನು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಆಗಸ್ಟ್ 14 ರ ರಾತ್ರಿ ತಮ್ಮ ನಿವಾಸದಲ್ಲಿ ಹಲವಾರು ನಾಯಕರ ಸಮ್ಮುಖದಲ್ಲಿ ಸ್ವೀಕರಿಸಿದರು.

Loading

Leave a Reply

Your email address will not be published. Required fields are marked *