ಅಮೆರಿಕಾದಲ್ಲಿ ಹಿಂದೂ ದೇಗುಲದ ಗೋಡೆ ಮೇಲೆ ಖಲಿಸ್ತಾನಿ ಪರ ಬರಹ: ಭಾರೀ ಖಂಡನೆ

ನ್ಯೂಯಾರ್ಕ್: ಅಮೆರಿಕಾದ ಕ್ಯಾಲಿಫೋರ್ನಿಯಾದ (California) ನೆವಾರ್ಕ್ ಸಿಟಿಯಲ್ಲಿ (Newark City) ಹಿಂದೂ ದೇವಾಲಯದ ಗೋಡೆಯಲ್ಲಿ ಖಲಿಸ್ತಾನಿ ಪರ ಘೋಷಣೆಗಳನ್ನು ಬರೆಯಲಾಗಿದೆ. ಈ ಕುರಿತು ಇದೀಗ ಭಾರೀ ಖಂಡನೆ ವ್ಯಕ್ತವಾಗುತ್ತಿದೆ.

ಹಿಂದೂ ಅಮೇರಿಕನ್ ಫೌಂಡೇಶನ್ ತನ್ನ ಎಕ್ಸ್ ಖಾತೆಯಲ್ಲಿ, ಸ್ವಾಮಿನಾರಾಯಣ ಮಂದಿರ ವಸನಾ ಸಂಸ್ಥೆಯ (Swaminarayan Mandir Vasana Sanstha) ಗೋಡೆಗಳ ಮೇಲೆ ಘೋಷಣೆಗಳನ್ನು (Pro-Khalistani Slogans) ಬರೆದಿರುವ ಫೋಟೋಗಳನ್ನು ಹಂಚಿಕೊಂಡಿದೆ.

ಫೋಟೋದಲ್ಲಿ, ದೇಗುಲದ ಗೋಡೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಭಾರತದ (India) ವಿರುದ್ಧ ದ್ವೇಷಪೂರಿತ ಬರಹಗಳನ್ನು ಬರೆಯಲಾಗಿದೆ.

ಘಟನೆಯ ಕುರಿತು ಸಂಪೂರ್ಣ ತನಿಖೆಯಾಗಬೇಕು ಎಂದು ಪ್ರತಿಷ್ಠಾನ ಒತ್ತಾಯಿಸಿದೆ. ಅಲ್ಲದೆ ಈ ಕುರಿತು ನೆವಾರ್ಕ್ ಪೊಲೀಸ್ ಇಲಾಖೆ ಹಾಗೂ ನ್ಯಾಯಾಂಗ ನಾಗರಿಕ ಹಕ್ಕುಗಳ ವಿಭಾಗಕ್ಕೆ ದೂರು ನೀಡಿದೆ.

ಸ್ವಾಮಿನಾರಾಯಣ ಮಂದಿರ ವಸನಾ ಸಂಸ್ಥೆಯ ಗೋಡೆಯ ಮೇಲೆ ಬರೆದಿರುವ ದ್ಷೇಷದ ಬರಹಗಳನ್ನು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ಕಾನ್ಸುಲೇಟ್ ಖಂಡಿಸಿದೆ. ಇದನ್ನು ಬರೆದಿರುವ ಕಿಡಿಗೇಡಿಗಳ ವಿರುದ್ಧ ತ್ವರಿತ ತನಿಖೆ ಮತ್ತು ಕಠಿಣ ಕ್ರಮಕ್ಕಾಗಿ ಯುಎಸ್ ಅಧಿಕಾರಿಗಳಿಗೆ ಒತ್ತಡ ಹೇರಿದೆ.

Loading

Leave a Reply

Your email address will not be published. Required fields are marked *