ವಿಧಾನಸಭೆಯಲ್ಲಿ ಕಬ್ಬು ಬೆಳಗಾರರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿದೆ. ಈ ವೇಳೆ ಸದನದಲ್ಲಿ ಸಚಿವರ ಅನುಪಸ್ಥಿತಿಗೆ ಆಡಳಿತ ಪಕ್ಷದ ಶಾಸಕ ಲಕ್ಷ್ಮಣ ಸವದಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಕ್ಕರೆ ಸಚಿವರು ಸದನದಲ್ಲಿ ಇಲ್ಲ, ಕೈಗಾರಿಕೆ ಸಚಿವರು ಇಲ್ಲ. ರೈತರ ಸುಲಿಗೆ ಮತ್ತು ಕಾರ್ಮಿಕರ ರಕ್ತ ಹಿರುವ ಕೆಲಸ ಆಗುತ್ತಿದೆ. ಕೂಡಲೇ ಸಮಸ್ಯೆ ಬಗೆ ಹರಿಸಬೇಕು ಎಂದು ಲಕ್ಷ್ಮಣ ಸವದಿ ಒತ್ತಾಯ ಮಾಡಿದರು.