ಬೆಂಗಳೂರು: ಬೆಂಬಲ ಬೆಲೆ ನೀಡುವಂತೆ ಫ್ರೀಡಂ ಪಾರ್ಕ್ನಲ್ಲಿ ತೆಂಗು ಬೆಳೆಗಾರರ ಪ್ರತಿಭಟನೆ ನಡೆಸುತ್ತಿದ್ದಾರೆ. ಕೊಬ್ಬರಿಗೆ 16,730 ಬೆಂಬಲ ಬೆಲೆ ನೀಡಬೇಕು. ತೆಂಗು ಮತ್ತು ಕೊಬ್ಬರಿಯನ್ನು ಎಪಿಎಂಸಿ ಮಾರುಕಟ್ಟೆಯ ಮೂಲಕವೇ ಖರೀದಿಸಬೇಕು. ರಾಜ್ಯದಲ್ಲಿ 6.46 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆ ಬೆಳೆಯಲಾಗುತ್ತದೆ. ವಾರ್ಷಿಕ 2.18 ಲಕ್ಷ ಮೆಟ್ರಿಕ್ ಟನ್ ಕೊಬ್ಬರಿ ಉತ್ಪಾದನೆಯಾಗುತ್ತದೆ. ಹಿಂದೆ ಪ್ರತಿ ಕ್ವಿಂಟಲ್ ಕೊಬ್ಬರಿ 16 ಸಾವಿರದಿಂದ 18 ಸಾವಿರದವರೆಗೂ ಮಾರಾಟವಾಗುತ್ತಿತ್ತು. ಕೇಂದ್ರ ಸರ್ಕಾರದ ತಪ್ಪು ಆಮದು ನೀತಿ ಮತ್ತು ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಸದ್ಯ ಪ್ರತಿ ಕ್ವಿಂಟಲ್ ಕೊಬ್ಬರಿಗೆ ಕೇವಲ 6 ಸಾವಿರದಿಂದ 7 ಸಾವಿರದವರೆಗೂ ಮಾರಾಟವಾಗುತ್ತಿದೆ. ಹೀಗಾಗಿ ರಾಜ್ಯದ ಎಲ್ಲಾ ಕೊಬ್ಬರಿ ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ.