Belagavi: ಅರಭಾವಿ ಮಠದ ಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಲಿಂಗೈಕ್ಯ

ಬೆಳಗಾವಿ: ಅರಭಾವಿ ಮಠದ (Arabhavi Mutt) ದುರದುಂಡೇಶ್ವರ ಮಠದ ಸಿದ್ದಲಿಂಗ ಸ್ವಾಮೀಜಿ (64) (Siddalinga Swamiji) ಹೃದಯಾಘಾತದಿಂದ (Heart Attack) ಲಿಂಗೈಕ್ಯರಾಗಿದ್ದಾರೆ. ಮಠದಲ್ಲಿರುವಾಗಲೇ ಸ್ವಾಮೀಜಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಗೋಕಾಕ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಸ್ವಾಮೀಜಿ ನಿಧನದಿಂದ ಅಪಾರ ಭಕ್ತ ಸಮೂಹ ಶೋಕಸಾಗರಲ್ಲಿ ಮುಳುಗಿದೆ. ಮಠಕ್ಕೆ ಕರ್ನಾಟಕ ಮಾತ್ರವಲ್ಲದೇ ಹೊರ ರಾಜ್ಯಗಳಲ್ಲಿಯೂ ಅಪಾರ ಭಕ್ತರಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ವಿವಿಧ ಮಠಾಧೀಶರು ಹಾಗೂ ಗಣ್ಯರು ಮಠಕ್ಕೆ ಆಗಮಿಸಿದ್ದಾರೆ. ಇಂದು ನಾಡಿನ ಹಲವು ಮಠಾಧೀಶರ ಸಮ್ಮುಖದಲ್ಲಿ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಲಾಗಿದೆ.

Loading

Leave a Reply

Your email address will not be published. Required fields are marked *