ನವದೆಹಲಿ: ಬಹುನಿರೀಕ್ಷಿತ ಚಂದ್ರಯಾನ-3 (Chandrayaan-3) ಚಂದ್ರನ ಮೇಲೆ ಸುರಕ್ಷಿತವಾಗಿ ಲ್ಯಾಂಡ್ ಆದ ಹಿನ್ನೆಲೆ ರಾಜಕಾರಣಿಗಳು ಸೇರಿದಂತೆ ಗಣ್ಯಾತಿಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ. ಅದೇ ರೀತಿ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಚಂದ್ರಯಾನ-3 ಯಶಸ್ಸಿಗೆ ಸಂತಸ ವ್ಯಕ್ತಪಡಿಸಿದ್ದು, ಟ್ವೀಟ್ (Tweet) ಮೂಲಕ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಚಂದ್ರಯಾನ-3 ವಿಕ್ರಂ ಲ್ಯಾಂಡರ್ (Vikram Lander) ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟು ಇಡೀ ದೇಶಕ್ಕೆ ಕೀರ್ತಿಯನ್ನು ತಂದಿದೆ. ಈ ಕುರಿತು ರಾಹುಲ್ ಗಾಂಧಿ ಟ್ವೀಟ್ ಮೂಲಕ ಇಸ್ರೋ (ISRO) ಸಂಸ್ಥೆಗೆ ಹಾಗೂ ವಿಜ್ಞಾನಿಗಳಿಗೆ ಶುಭಾಶಯಗಳನ್ನು ಕೋರಿದ್ದಾರೆ.
ಟ್ವೀಟ್ನಲ್ಲಿ ಏನಿದೆ?
ಇಂದಿನ ಪ್ರವರ್ತಕ ಸಾಧನೆಗಾಗಿ ಇಸ್ರೋ ತಂಡಕ್ಕೆ ಅಭಿನಂದನೆಗಳು. ನಮ್ಮ ವೈಜ್ಞಾನಿಕ ಸಮುದಾಯದ ದಶಕಗಳ ಪ್ರಚಂಡ ಚತುರತೆ ಮತ್ತು ಕಠಿಣ ಪರಿಶ್ರಮದ ಫಲವಾಗಿ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಆಗಿದೆ. 1962ರಿಂದ ಭಾರತದ ಬಾಹ್ಯಾಕಾಶ ಕಾರ್ಯಕ್ರಮವು ಹೊಸ ಎತ್ತರವನ್ನು ಅಳೆಯುವುದನ್ನು ಮುಂದುವರಿಸಿದೆ ಮತ್ತು ಯುವ ಕನಸುಗಾರರ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ಶ್ಲಾಘಿಸಿ ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.