ರಾಯಚೂರು :- ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಯಲ್ಲಮ್ಮ ಎಂಬ ವಿದ್ಯಾರ್ಥಿನಿ ಗಂಭೀರ ಅಸ್ವಸ್ಥರಾಗಿರುವುದು ಬೆಳಕಿಗೆ ಬಂದಿದೆ.ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಫಾತಿಮಾ ನಗರದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರು ಮಧ್ಯಾಹ್ನದ ಊಟ ಫಲಾವ್ ಮತ್ತು ಟೊಮೊಟೊ ಚಟ್ನಿ ಸೇವಿಸಿದ್ದರಿಂದ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರು ಪೇರಾಗಿದೆ.
ವಸತಿ ನಿಲಯದ ಮೇಲ್ವಿಚಾರಕಿ ಪಾರ್ವತಿ ಹಾಸ್ಟೆಲ್ ನಲ್ಲಿ ಇರುವುದಿಲ್ಲ.ಆದರೆ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದರು ಯಾವ ಅಧಿಕಾರಿಗಳು ಸಹ ಬಂದಿಲ್ಲ.ಯಲ್ಲಮ್ಮ ಎಂಬ ವಿದ್ಯಾರ್ಥಿನಿ 6ನೆ ತರಗತಿ ವಿದ್ಯಾರ್ಥಿಯಾಗಿದ್ದು, ವಸತಿ ನಿಲಯದ ಅಡುಗೆದಾರರು ಕಳಪೆ ಮಟ್ಟದ ಊಟ ಮಾಡಿದ್ದರಿಂದ ವಿದ್ಯಾರ್ಥಿಗಳು ಅಸ್ವಸ್ಥರಾಗಲು ಮೂಲ ಕಾರಣವಾಗಿದೆ.