ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆ, ಇದೀಗ ಮತ್ತೆ ಅಬ್ಬರಿಸಲು ಆರಂಭಿಸಿದೆ. ನಗರದ ಹಲವಡೆ ಗುಡುಗು ಸಹಿತ ಮಳೆಯಾಗುತ್ತಿದ್ದು,(Lavade Thunderstorm) ರಾಜಧಾನಿಯಲ್ಲಿ ವರುಣನ ಆರ್ಭಟ ಜೋರಾಗಿದೆ. ಪ್ರಮುಖವಾಗಿ ನಗರದ ದಕ್ಷಿಣ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಜಯನಗರ, ಜೆಪಿ ನಗರ ಸೇರಿದಂತೆ ಹಲವು ಕಡೆ ಮಳೆಯ ಆರ್ಭಟ (Rains in many places including Jayanagar, JP Nagar)ಜೋರಾಗಿದೆ. ತಗ್ಗು ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿರುವುದರಿಂದ, ಕೆಲವು ಮನೆಗಳಿಗೂ ಮಳೆ ನೀರು ನುಗ್ಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಹೆಬ್ಬಾಳ ಸುತ್ತಮುತ್ತಲ ಪ್ರದೇಶದಲ್ಲೂ ಭಾರೀ ಮಳೆಯಾಗುತ್ತಿದ್ದು, ಹೆಬ್ಬಾಳ ಫ್ಲೈಓವರ್ ಬಳಿ ಬವಾಹನ ಸಂಚಾರಕ್ಕೆ ಅಡಚಣೆಯುಂಟಾಗಿದೆ.
ಇನ್ನೂ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi)ಅವರು ಬೆಂಗಳೂರಿನಲ್ಲಿ ಮೆಗಾ ರೋಡ್ ಶೋ ನಡೆಸಲಿದ್ದಾರೆ. ಬರೋಬ್ಬರಿ 5.5 ಕಿ.ಮೀ ಉದ್ದದ ರೋಡ್ ಶೋ ಮಾಡಲಿದ್ದಾರೆ. ರೋಡ್ ಶೋಗೆ ಯಶವಂತಪುರದಲ್ಲಿ ಭರ್ಜರಿ ತಯಾರಿ ಮಾಡಿಕೊಳ್ಳಲಾಗಿದೆ. ನೈಸ್ ಜಂಕ್ಷನ್ನಿAದ ಸುಮನಹಳ್ಳಿ ಬ್ರಿಡ್ಜ್ ತನಕ ಮೋದಿ ರೋಡ್ ಶೋ ಇರಲಿದೆ. ಯಶವಂತಪುರ, ಹೆಬ್ಬಾಳ, ಮಲ್ಲೇಶ್ವರಂ, ಮಹಾಲಕ್ಷ್ಮಿಲೇಔಟ್, ದಾಸರಹಳ್ಳಿ, ಆರ್.ಆರ್. ನಗರ, ಯಲಹಂಕ, ಬ್ಯಾಟರಾಯನಪುರ, ಪುಲಿಕೇಶಿನಗರ ಕ್ಷೇತ್ರಗಳ ಮೇಲೆ ಗಮನ ಕೇಂದ್ರೀಕರಿಸಲಾಗಿದೆ. ಆದ್ರೆ ಮಳೆಯ ರಾಯನ ಅಬ್ಬರ ಮುಂದುವರೆದರೆ ಮೋದಿ ರೋಡ್ ಶೋ ಕ್ಯಾನ್ಸಲ್ ಆಗುವ ಸಾಧ್ಯತೆ ಇದೆ.