ಬೆಂಗಳೂರು ;- ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆ 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.ಭಾನುವಾರ ಬೆಂಗಳೂರು, ಮಂಗಳೂರು ಸೇರಿ ಹಲವೆಡೆ ಮಳೆಯಾಗಿದೆ. ಕರಾವಳಿ ಪ್ರದೇಶದಲ್ಲಿ ಗಂಟೆಗೆ 45 ರಿಂದ 55 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಮುಂದಿನ ಐದು ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ