ಬೆಂಗಳೂರು ;- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ನಾಳೆಯಿಂದ ಮತ್ತೆ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಬೆಳಗಾವಿ, ಉಡುಪಿ ಮತ್ತು ಕಾರವಾರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಗಳಿವೆ.
ಅಲ್ಲದೇ ಇನ್ನುಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಕಳೆದ ಕೆಲ ದಿನಗಳಿಂದ ವಿರಾಮ ಪಡೆದಿದ್ದ ಮಳೆರಾಯ ಮತ್ತೆ ಅರ್ಭಟಿಸಲಿದ್ದಾನೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ ಮೂರರಿಂದ ಮಳೆ ಸುರಿಯಲಿದೆ. ಇನ್ನೂ ವಿಜಯಪುರ, ರಾಯಚೂರು, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಬೀದರ್, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಯಾದಗಿರಿ, ಬೆಂಗಳೂರು ನಗರ, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ಕೋಲಾರ, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.