ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮತ್ತೆ 2 ದಿನ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದರಿಂದ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಚಾಮಾರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲೆವೆಡೆ ಮುಂದಿನ 2 ದಿನ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಹಲವು ಭಾಗದಲ್ಲಿ ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ ಹಲವು ಕಡೆ ಮಳೆ ಕ್ಷೀಣಿಸಿದ್ದು, ಬಿಸಿಲಿನ ಧಗೆ ಹೆಚ್ಚಾಗಿದೆ.ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ಸಂಜೆ ವೇಳೆಗೆ ಮಳೆ ನಿರೀಕ್ಷಿಸಲಾಗಿದೆ.