ಅಫ್ಘಾನಿಸ್ಥಾನದಲ್ಲಿ ಮಳೆ: 30 ಜನರು ಸಾವು, 40ಕ್ಕೂ ಹೆಚ್ಚು ಮಂದಿ ನಾಪತ್ತೆ

ಕಾಬೂಲ್ : ಅಫ್ಗಾನಿಸ್ತಾನದಲ್ಲಿ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಉಂಟಾದ ಪ್ರವಾಹದಲ್ಲಿ ಇದುವರೆಗೂ 30 ಜನರು ಮೃತಪಟ್ಟಿದ್ದು, ಅಂದಾಜು 40ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ವಿಪತ್ತು ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೂರ್ವ ಕಾಬೂಲ್ನ ಜಲ್ರೆಜ್ ಜಿಲ್ಲೆಯಲ್ಲಿಯೇ 26 ಜನರು ಸಾವಿಗೀಡಾಗಿದ್ದರೆ, ಕಾಬೂಲ್ನಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ನೂರಾರು ಮನೆಗಳು ಕೊಚ್ಚಿಹೋಗಿವೆ ಎಂದು ಸಚಿವಾಲಯದ ವಕ್ತಾರ ಮೊಹಮ್ಮದ್ ಶಫಿ ರಹೀಂ ತಿಳಿಸಿದ್ದಾರೆ.
ಪ್ರವಾಹದಲ್ಲಿ ನೂರಾರು ಎಕರೆ ಕೃಷಿ ಭೂಮಿ ಕೊಚ್ಚಿ ಹೋಗಿದ್ದು, ನೂರಾರು ಮನೆಗಳಿಗೆ ಹಾನಿಯಾಗಿದೆ. ನಾಪತ್ತೆ ಆಗಿರುವವರು ಆವಶೇಷಗಳ ಅಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಪ್ರಾಂತೀಯ ಗವರ್ನರ್ ಕಚೇರಿ ಹೇಳಿಕೆ ನೀಡಿದೆ. ಕಾಬೂಲ್ ಆಡಳಿತ ಸಂತ್ರಸ್ತ ಕುಟುಂಬಗಳಿಗೆ ನೆರವಿಗೆ ಧಾವಿಸಲಿದೆ ಎಂದು ತಾಲಿಬಾನ್ ಸರ್ಕಾರದ ವಕ್ತಾರ ಜಬಿಹುಲ್ಲಾ ಮುಜಾಹಿದ್ ಹೇಳಿದ್ದಾರೆ.

Loading

Leave a Reply

Your email address will not be published. Required fields are marked *