ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ನೀತಿ ಸಂಹಿತೆಯ ನಡುವೆಯೂ ಮೇ.10ರಂದು ಫಲಿತಾಂಶ ಪ್ರಕಟಣೆಯ ದಿನಾಂಕದಂದೆ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಿಂದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಈಗ ತರಾತುರಿಯಲ್ಲಿ ಅಕ್ರಮ ನೇಮಕ ಮಾಡಿಕೊಳ್ಳುವ ಸಲುಗಾವಿ ಮೌಖಿಕ ಸಂದರ್ಶನ ನಡೆಸಲಾಗಿದೆ.
ಇದು ಅಕ್ರಮದಿಂದ ಕೂಡಿದ್ದು, ಈ ನೇಮಕಾತಿ ರದ್ದುಗೊಳಿಸಿ, ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಒತ್ತಾಯಿಸಿದ್ದಾರೆ.