ಹಾವೇರಿ;-ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮತ್ತೆ ರಮೇಶ್ ಜಾರಕಿಹೊಳಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಸಾಕಷ್ಟು ಪ್ರಯತ್ನ ಮಾಡಿದರು. ನನ್ನ ಬಗ್ಗೆ ಏನೇನೋ ಮಾತಾಡಿ ಅಪಪ್ರಚಾರ ನಡೆಸಿದರು. ನಾನು ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಚುನಾವಣೆ ಎದುರಿಸಿದೆ. ಅವರಿಗೆ ಜನ ತಕ್ಕ ಉತ್ತರ ನೀಡಿ ನನ್ನನ್ನು ಗೆಲ್ಲಿಸಿದರು ಎಂದು ಶಾಸಕ ರಮೇಶ್ ಜಾರಕಿಹೊಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಪ್ರತಿಯೊಬ್ಬರಿಗೂ 5,000 ಹಣ ನೀಡಿ ಮತ ಪಡೆಯುವೆ ಅಂದಿದ್ದರು. ಇಂದು ರಾಜ್ಯದಲ್ಲಿ ನಮ್ಮ ಸರ್ಕಾರ ಇದೆ, ನಾನು ಮಂತ್ರಿ ಆಗಿರುವೆ. ಜನತೆ ನಮ್ಮ ಜೊತೆ ಇರುವವರೆಗೂ ಏನೂ ಮಾಡಲು ಆಗುವುದಿಲ್ಲ. ಇದಕ್ಕೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರೇ ಸಾಕ್ಷಿಯಾಗಿದ್ದಾರೆ ಎಂದರು.
2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ಹೋರಾಟ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಮೀಸಲಾತಿ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಿಕೊಡುತ್ತೇವೆ. ಪಂಚಮಸಾಲಿ ಸಮುದಾಯಕ್ಕೆ ಸೂಕ್ತ ಮೀಸಲಾತಿ ಸಿಗಬೇಕು. ಸರ್ಕಾರದ ಒಳಗೂ, ಹೊರಗೂ ನಾನು ಹೋರಾಟ ಮಾಡುತ್ತೇನೆ. ಮೀಸಲಾತಿ ಕಲ್ಪಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದ್ದಾರೆ