ಬೆಂಗಳೂರು;- ಶೀಘ್ರವೇ 16 ಸಾವಿರ `ಪೊಲೀಸ್ ಕಾನ್ಸ್ ಟೇಬಲ್’ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಗೃಹ ಇಲಾಖೆಯಲ್ಲಿ ಖಾಲಿ ಇರುವ 20 ಸಾವಿರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನಿರ್ಧರಿಸಲಾಗಿದ್ದು, ಪ್ರಮುಖವಾಗಿ ರಾಜ್ಯದಲ್ಲಿ ಖಾಲಿ ಇರುವ 16 ಸಾವಿರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ಪೈಕಿ ಈ ವರ್ಷ ಬೆಂಗಳೂರು ನಗರಕ್ಕೆ 2,500 ಹಾಗೂ ರಾಜ್ಯದ ಇತರೆ ಭಾಗಗಳಿಗೆ 3,500 ಕಾನ್ಸ್ ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದ್ದು, ಈಗಾಗಲೇ ಆರ್ಥಿಕ ಇಲಾಖೆಯೂ ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ.
ಹಿಂದಿನ ಪಿಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ನ್ಯಾಯಾಲಯದ ತೀರ್ಪು, ನಿರ್ದೇಶನದ ಆಧಾರದಲ್ಲಿ 545 ಪಿಎಸ್ ಐ ನೇಮಕಾತಿ ಪ್ರಕ್ರಿಯೆ ಜೊತೆಗೆ ಹೆಚ್ಚುವರಿಯಾಗಿ 400 ಪಿಎಸ್ ಐ ನೇಮಕಾತಿ ಮಾಡಲಾಗುವುದು ಎಂದು ಹೇಳಿದ್ದಾರೆ.