High Court: ಪತಿ ನೀಡಿದ ರಾಜೀನಾಮೆ ಪತ್ನಿ ಹಿಂಪಡೆಯಲಾಗದು- ಹೈಕೋರ್ಟ್

ಬೆಂಗಳೂರು;- ಪತಿ ನೀಡಿದ ರಾಜೀನಾಮೆಯನ್ನು ಪತ್ನಿ ಹಿಂಪಡೆಯಲಾಗದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಮಂಡ್ಯ ಜಿಲ್ಲೆಯ ಮದ್ದೂರಿನ ಡಿ ವೆಂಕಟೇಶ್‌ ಎಂಬುವರು ಹೈಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್​ ದೀಕ್ಷಿತ್​ ಅವರಿದ್ದ ನ್ಯಾಯಪೀಠ ಈ ಆದೇಶ ಮಾಡಿದೆ

, ಸ್ವತಃ ನೌಕರನೇ ಉದ್ಯೋಗದಲ್ಲಿ ಇರಲು ಸಿದ್ಧರಿಲ್ಲದೇ ರಾಜೀನಾಮೆ ನೀಡಿದ್ದಾರೆ. ಇಂತಹ ಸಂದರ್ಭದಲ್ಲಿ ಆತನ ಪತ್ನಿ ಅಥವಾ ಮಕ್ಕಳು ಉದ್ಯೋಗಿ ಸೇವೆಯಲ್ಲಿ ಮುಂದುವರೆಯಲು ಹೇಗೆ ಕಾರಣವಾಗುತ್ತಾರೆ. ಇದು ಬಾಯಾರಿಕೆಯಿಲ್ಲದಿದ್ದರೂ ಇಷ್ಟವಿಲ್ಲದ ಕುದುರೆಯನ್ನು ನೀರು ಕುಡಿಯಲು ನದಿಗೆ ಎಳೆದಂತಾಗುತ್ತದೆ. ರಾಜೀನಾಮೆಯು ಉದ್ಯೋಗಿಯ ಸ್ವಯಂಪ್ರೇರಿತ ಕ್ರಿಯೆಯಾಗಿದೆ. ಅದನ್ನು ಸಲ್ಲಿಸುವ ಮೂಲಕ ಆತ ಸೇವೆಯನ್ನು ತೊರೆಯಲು ಪ್ರಯತ್ನಿಸುತ್ತಾನೆ. ಹೀಗಾಗಿ, ಉದ್ಯೋಗದಾತ ಸಂಸ್ಥೆಯು ಅಂಗೀಕರಿಸುವ ಮೊದಲೇ ರಾಜೀನಾಮೆಯನ್ನು ಸ್ವತಃ ಉದ್ಯೋಗಿ ಹಿಂಪಡೆಯಬೇಕು. ಅದನ್ನು ಹೊರತುಪಡಿಸಿ ಪತ್ನಿ ಮತ್ತು ಮಕ್ಕಳು ಉದ್ಯೋಗಿಯ ಪರವಾಗಿ ರಾಜೀನಾಮೆ ಹಿಂಪಡೆಯಲು ಅವಕಾಶವಿಲ್ಲ ಎಂದು ಪೀಠ ಹೇಳಿದೆ

Loading

Leave a Reply

Your email address will not be published. Required fields are marked *