ಬೆಂಗಳೂರು: ಕಾಂಗ್ರೆಸ್ ರಾಜ್ಯ ಸರ್ಕಾರದ (Congress Government) ವಿರುದ್ಧ ಶ್ರೀರಾಮಸೇನೆ ವತಿಯಿಂದ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ರಾಜ್ಯಪಾಲರಿಗೆ ದೂರು ನೀಡಿದರು. ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಮತಾಂತರ ನಿಷೇಧ ಕಾಯ್ದೆಗಳನ್ನ ವಾಪಸ್ ಪಡೆಯದಂತೆ ಕ್ರಮ ಕೈಗೊಳ್ಳಲು ಮನವಿ ಮಾಡಿದರು.
ಅಲ್ಲದೇ ಕಾಂಗ್ರೆಸ್ ಸರ್ಕಾರ ದ್ವೇಷ ಭಾವನೆ ಮೂಡಿಸುತ್ತಿದೆ. ನಿಷೇಧಿತ ಕಾಯ್ದೆಗಳನ್ನ ಮತ್ತೆ ಹಿಂಪಡೆಯುವುದು ಸರಿಯಲ್ಲ. ಹಾಗಾಗಿ ಮತಾಂತರ ನಿಷೇಧ ಕಾಯ್ದೆ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಗಳನ್ನ ಹಿಂಪಡೆಯದಂತೆ ಆಗ್ರಹಿಸಿದರು.
ರಾಜ್ಯಪಾಲರ ಭೇಟಿ ಬಳಿಕ ಉಡುಪಿ ಕಾಲೇಜಿನಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣ (Udupi College Case) ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದರು. ಕಾಂಗ್ರೆಸ್ ಸರ್ಕಾರ ಮುಸ್ಲಿಮರನ್ನ (Muslims) ಓಲೈಕೆ ಮಾಡುವ ಕೆಲಸ ಮಾಡ್ತಿದೆ. ಟೆರರಿಸ್ಟ್ಗಳನ್ನ ಬಚಾವ್ ಮಾಡೋ ಕೆಲಸ ಆಗ್ತಿದೆ. ಇಂತಹ ಪ್ರಕರಣಗಳಿಂದ ಮಹಿಳೆಯರು ಹೆದರುತ್ತಿದ್ದಾರೆ ಎಂದು ಕಿಡಿ ಕಾರಿದರು.
ಇದಕ್ಕೂ ಮುನ್ನ, ಮತಾಂತರ (Conversion) ನಿಷೇಧ ಕಾಯ್ದೆ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಗಳನ್ನ ವಾಪಸ್ ಪಡೆಯದಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ. ಮಸೂದೆ ಮಂಡನೆಯಾದ ಬಳಿಕ ರಾಜ್ಯಪಾಲರ ಅಂಕಿತ ಪಡೆಯಲು ಬರುತ್ತೆ. ಆಗ ಬಿಲ್ ಅನ್ನು ಮಾನ್ಯ ಮಾಡದಂತೆ ತಿಸ್ಕರಿಸಬೇಕು ಎಂದು ಕೇಳಿಕೊಂಡಿದ್ದೇವೆ ಎಂದರು.