ಬೆಂಗಳೂರು : ನಡು ರಸ್ತೆಯಲ್ಲೇ ರೌಡಿಯೊಬ್ಬ ಡ್ಯಾಗರ್ ತೋರಿಸಿ ಯುವತಿಗೆ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಹಾಡಹಗಲೇ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ದೃಶ್ಯಾವಳಿಗಳು ಸೆರೆಯಾಗಿದೆ. ಡ್ಯಾಗರ್ ಹಿಡಿದು ಯುವತಿಯನ್ನು ಹಿಂಬಾಲಿಸಿಕೊಂಡು ಬಂದ ರೌಡಿ ಕಿರುಕುಳ ನೀಡಿದ್ದಾರೆ. ಅಲ್ಲದೇ ಮೊಬೈಲ್ ಕೂಡ ಕಸಿದುಕೊಂಡಿದ್ದಾನೆ ಎನ್ನಲಾಗಿದೆ.
ನಂತರ ಯುವತಿಯ ರಕ್ಷಣೆಗೆ ಮತ್ತೋರ್ವ ಮಹಿಳೆ ಧಾವಿಸಿದ್ದು, ಆಗ ರೌಡಿ ಎಸ್ಕೇಪ್ ಆಗಿದ್ದಾನೆ. ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಜನಾಕ್ರೋಶಕ್ಕೆ ಕಾರಣವಾಗಿದೆ. ಪೊಲೀಸರು ಸಾರ್ವಜನಿಕರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.