Russia: ಲಿಂಗ ಬದಲಾವಣೆ ಬ್ಯಾನ್ ಮಾಡಿದ ರಷ್ಯಾ..!

ಮಾಸ್ಕೋ: ರಷ್ಯಾ ದೇಶದಲ್ಲಿ ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆ ಮಾಡಿಸುವುದನ್ನು ನಿಷೇಧಿಸುವ ಕಾನೂನಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಹಿ ಹಾಕಿದ್ದಾರೆ. ಲಿಂಗ ಪರಿವರ್ತನೆಗೆ ಸಂಬಂಧಿಸಿದ ವೈದ್ಯಕೀಯ ಚಿಕಿತ್ಸೆಗಳನ್ನು ಕಾನೂನು ಬಾಹಿರಗೊಳಿಸುವ ಕಾನೂನಿಗೆ ಇದು ಪೂರಕವಾಗಿದೆ.
ಮಕ್ಕಳ ಅಸಮರ್ಪಕ ಬೆಳವಣಿಗೆ ಮತ್ತು ಜನ್ಮ ದೋಷಗಳನ್ನು ಪರಿಹರಿಸಲು ಬಳಸುವ ವೈದ್ಯಕೀಯ ವಿಧಾನಗಳಿಗೆ ನಿರ್ಬಂಧವು ಅನ್ವಯಿಸುವುದಿಲ್ಲ. ಹಾಗೆಯೇ ಲೈಂಗಿಕ ವ್ಯತ್ಯಾಸದ ಬಾಲ್ಯದ ಅಸ್ವಸ್ಥತೆಗಳಿಗೆ ಸಂಬಂಧಿಸಿದ ಆನುವಂಶಿಕ ಮತ್ತು ಅಂತಃಸ್ರಾವಕ ಸಮಸ್ಯೆಗಳಿಗೆ ಅನ್ವಯಿಸುವುದಿಲ್ಲ ಎಂದು ರಷ್ಯಾದ ಆರೋಗ್ಯ ಸಚಿವಾಲಯ ಸ್ಪಷ್ಟನೆ ನೀಡಿದೆ.
ಕಾನೂನಿನ ಮುಖ್ಯ ಗುರಿಯು, ರಷ್ಯಾ ಸಮಾಜದ ಸಾಂವಿಧಾನಿಕ ನೈತಿಕ ತತ್ವಗಳು ಮತ್ತು ಕೌಟುಂಬಿಕ ಮೌಲ್ಯಗಳನ್ನು ಕಾಪಾಡಿಕೊಳ್ಳುವುದು. ದೇಶದ ಜನರ ಆರೋಗ್ಯವನ್ನು, ಅದರಲ್ಲೂ ವಿಶೇಷವಾಗಿ ಮಕ್ಕಳ ಆರೋಗ್ಯವನ್ನು ಕಾಪಾಡುವುದಾಗಿದೆ. ಈ ಕಾನೂನು ಅಂಗೀಕಾರವಾದ ದಿನದಿಂದಲೇ ಜಾರಿಗೆ ಬರುತ್ತದೆ. ಈಗಾಗಲೇ ಲಿಂಗ ಬದಲಾಯಿಸಿಕೊಂಡಿರುವವರಿಗೆ ಈ ಕಾನೂನು ಅನ್ವಯವಾಗುವುದಿಲ್ಲ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

Loading

Leave a Reply

Your email address will not be published. Required fields are marked *