ನವದೆಹಲಿ: ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ (Sanjay Singh) ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಭಾರತದ ಕುಸ್ತಿಪಟು ಸಾಕ್ಷಿ ಮಲಿಕ್ (Sakshee Malikkh) ಕುಸ್ತಿಗೆ ವಿದಾಯ ಘೋಷಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ, ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಬ್ಯುಸಿನೆಸ್ ಪಾರ್ಟನರ್ ಹಾಗೂ ಆಪ್ತರಾಗಿರುವ ಸಂಜಯ್ ಸಿಂಗ್ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ನಾನು ಕುಸ್ತಿ ಪಂದ್ಯಗಳಿಂದ ದೂರವಾಗುತ್ತಿದ್ದೇನೆ ಎಂದು ಕಣ್ಣೀರು ಹಾಕುತ್ತಾ ಘೋಷಿಸಿದರು.
ಅಲ್ಲದೇ ಇದೇ 2016ರಲ್ಲಿ ನಡೆದ ರಿಯೋ ಒಲಿಂಪಿಕ್ಸ್ನಲ್ಲಿ ಸಾಕ್ಷಿ ಮಲಿಕ್ ಕಂಚಿನ ಪದಕ ವಿಜೇತರಾಗಿದ್ದರು.
ಕಾಮನ್ವೆಲ್ತ್, ಏಷ್ಯನ್ ಗೇಮ್ಸ್ ಪದಕ ವಿಜೇತೆ ವಿನೇಷ್ ಫೋಗಟ್ ಕೂಡಾ ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟರು. ಸಂಜಯ್ ಸಿಂಗ್ ಅಧ್ಯಕ್ಷರಾಗಿ ಆಯ್ಕೆಯಾಗಿರುವುದರಿಂದ ಮಹಿಳಾ ಕುಸ್ತಿ ಪಟುಗಳ ಮೇಲೆ ದೌರ್ಜನ್ಯ ಮುಂದುವರಿಯಲಿದೆ. ನಮಗೆ ನ್ಯಾಯ ಸಿಗುವುದು ಹೇಗೆ ಎಂದು ನಮಗೆ ಗೊತ್ತಾಗುತ್ತಿಲ್ಲ. ನಮ್ಮ ಕುಸ್ತಿ ಭವಿಷ್ಯ ಹೇಗೆ ಎಂಬ ಚಿಂತೆ ಶುರುವಾಗಿದೆ. ಎಲ್ಲಿಗೆ ಹೋಗಬೇಕು ಎಂದು ಗೊತ್ತಾಗುತ್ತಿಲ್ಲ ಎಂದು ಫೋಗಟ್ ಹೇಳಿದರು.
ಕೇಂದ್ರ ಸರ್ಕಾರವು ನಮಗೆ ನೀಡಿದ ಭರವಸೆಯನ್ನು ಈಡೇರಿಸದೇ ಇರುವುದು ದೌರ್ಭಾಗ್ತ ಎಂದು ಬಜರಂಗ್ ಪುನಿಯಾ ಹೇಳಿದ್ರು. ನಮಗೆ ಯಾವುದೇ ಪಕ್ಷದ ಜೊತೆ ಸಂಬಂಧವಿಲ್ಲ. ನಾವು ರಾಜಕೀಯಕ್ಕಾಗಿ ಇಲ್ಲಿಗೆ ಬಂದಿಲ್ಲ. ನಾವು ಸತ್ಯಕ್ಕಾಗಿ ಹೋರಾಡುತ್ತಿದ್ದೆವು. ಆದರೆ ಇಂದು ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಕುಸ್ತಿ ಫೆಡರೇಷನ್ ಅಧ್ಯಕ್ಷರಾದರು ಎಂದು ಪುನಿಯಾ ಹೇಳಿದರು.