ಬೆಂಗಳೂರು : ಶೂಟಿಂಗ್ ವೇಳೆ ಕನ್ನಡದ ಖ್ಯಾತ ಸಾಹಸ ನಿರ್ದೇಶಕ ರವಿವರ್ಮಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ ರವಿಚಂದ್ರನ್ ಅಭಿನಯದ ಮುಧೋಳ್ ಸಿನಿಮಾದ ಸಾಹಸ ದೃಶ್ಯ ಚಿತ್ರೀಕರಣ ವೇಳೆ ರೋಪ್ ಹರಿದು ಅವರಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಕನ್ನಡದ ಹಲವು ಸಿನಿಮಾಗಳಿಗೆ ಸಾಹಸ ನಿರ್ದೇಶನ ಮಾಡಿರುವ ರವಿವರ್ಮ ಸ್ಯಾಂಡಲ್ ವುಡ್ ನಲ್ಲಿ ಜನಪ್ರಿಯ ಸಾಹಸ ನಿರ್ದೇಶಕರಾಗಿ ಮಿಂಚಿದ್ದಾರೆ.