ಸ್ಯಾಂಡಲ್ ವುಡ್ ನಟ ನಾಗಭೂಷಣ್ ಅರೆಸ್ಟ್

ಬೆಂಗಳೂರು: ಸ್ಯಾಂಡಲ್ ವುಡ್ ನಟ ನಾಗಭೂಷಣ್ ಅವರನ್ನು ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ . ಕೆಲವೇ ಗಂಟೆಗಳಲ್ಲಿ ಅವರನ್ನು ಕೋರಮಂಗಲದಲ್ಲಿರುವ ಜಡ್ಜ್ ಮುಂದೆ ಹಾಜರುಪಡಿಸುವುದಾಗಿ ತಿಳಿದು ಬಂದಿದೆ. ನಾಗಭೂಷಣ್ ಅವರು ಕೂಡ ಸ್ವತಃ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.
ಕನ್ನಡದ ಹೆಸರಾಂತ ನಟ ನಾಗಭೂಷಣ್ ಕಾರು ಅಪಘಾತವಾಗಿದ್ದು  ಬೆಂಗಳೂರಿನ ವಸಂತಪುರದ ನಿವಾಸಿ 48ರ ವಯಸ್ಸಿನ ಪ್ರೇಮಾ ಎನ್ನುವವರು ಸಾವನ್ನಪ್ಪಿದ್ದಾರೆ  ನಿನ್ನೆ ತಡ ರಾತ್ರಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ರಾತ್ರಿ ಒಂಬತ್ತು ಗಂಟೆಗೆ ನಾಗಭೂಷಣ್ ತಮ್ಮ ಮನೆಗೆ ತೆರಳುವಾಗ ಅಪಘಾತವಾಗಿದೆ ಎಂದು ತಿಳಿದು ಬಂದಿದೆ.

Loading

Leave a Reply

Your email address will not be published. Required fields are marked *