ಬೆಳಗಾವಿ: ಸತೀಶ್ ಜಾರಕಿಹೊಳಿ, ನಮ್ಮ ನಡುವೆ ಯಾವುದೇ ವಾರ್ ಇಲ್ಲ, ನಮ್ಮದು ಬಿಜೆಪಿ ವಿರುದ್ಧದ ಹೋರಾಟ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ನಾನು 36 ಸಾವಿರ ಕೋಟಿ ಹಣವನ್ನು ಮಹಿಳೆಯರಿಗೆ ಕೊಡಬೇಕು. ಬಹಳಷ್ಟು ಅಳೆದು ತೂಗಿ ನಾನು ಸಚಿವೆಯಾಗಿ ಹೆಜ್ಜೆ ಇಡುತ್ತಿದ್ದೇನೆ ಎಂದಿದ್ದಾರೆ.
ಮಾನವ ಮತ್ತು ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿರುವ ಹಿನ್ನಲೆ ಇಂದು ಸಿಎಂ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.