ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಸಮರ್ಥ ವ್ಯಕ್ತಿಯ ಆಯ್ಕೆ: ಶಾಸಕ ಪ್ರಭು ಚವ್ಹಾಣ

ಬೆಂಗಳೂರು , ರಾಜ್ಯ ವಿಧಾನಸಭೆಯ ಪ್ರತಿಪಕ್ಷ ನಾಯಕನಾಗಿ ನೇಮಕಗೊಂಡ ಆರ್.ಅಶೋಕ್ ಅವರಿಗೆ ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಪಕ್ಷದ ವರಿಷ್ಠರು ರಾಜ್ಯ ವಿಧಾನಸಭೆಯ ವಿರೋಧಪಕ್ಷ ನಾಯಕನ ಸ್ಥಾನಕ್ಕೆ ಸಮರ್ಥ ವ್ಯಕ್ತಿಯನ್ನು ನೇಮಕ ಮಾಡಿದ್ದಾರೆ. ರಾಜ್ಯದ ಉಪ ಮುಖ್ಯಮಂತ್ರಿಯಾಗಿ, ವಿವಿಧ ಇಲಾಖೆಗಳ ಸಚಿವರಾಗಿ ಸಾಕಷ್ಟು ಮಹತ್ವದ ಯೋಜನೆ ಜಾರಿಗೆ ತಂದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದ ಆರ್.ಅಶೋಕ ಅವರನ್ನು ವಿರೋಧ ಪಕ್ಷದ ನಾಯಕನ ಜವಾಬ್ದಾರಿ‌‌‌ ವಹಿಸಿರುವುದಕ್ಕೆ ಪಕ್ಷಕ್ಕೆ ಹೊಸ‌‌ ಶಕ್ತಿ ಸಿಕ್ಕಂತಾಗಿದೆ ಎಂದಿದ್ದಾರೆ.

ಜವಾಬ್ದಾರಿಯನ್ನು ಸಮರ್ಥವಾಗಿ ಎದುರಿಸುವ ಜಾಣ್ಮೆ, ಸಂಘಟನಾ ಚತುರತೆ ಮತ್ತು ಸಾಕಷ್ಟು ಅನುಭವ ಹೊಂದಿರುವ ಆರ್.ಅಶೋಕ್ ಅವರು ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲಿದ್ದಾರೆ. ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರ‌ಕ್ಕೆ‌ ಬಂದಾಗಿನಿಂದಲೂ ಒಂದಿಲ್ಲೊಂದು ವಿವಾದಗಳಿಗೆ ಸಿಲುಕುತ್ತಿದೆ. ಚುನಾವಣೆ ಭರವಸೆಗಳನ್ನು ಈಡೇರಿಸಲು ಒದ್ದಾಡುತ್ತಾ, ಜನ ವಿರೋಧಿ ನಿಲುವುಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಸರ್ಕಾರ ಮಾಡುತ್ತಿರುವ ಭ್ರಷ್ಟಾಚಾರ, ದುರಾಡಳಿತದ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಡೋಣ. ಜನಸಾಮಾನ್ಯರ ಧ್ವನಿಯನ್ನು ವಿಧಾನಸಭೆಯಲ್ಲಿ ಪ್ರತಿದ್ವನಿಸುವ ಕೆಲಸವನ್ನು ತಮ್ಮ ನೇತೃತ್ವದಲ್ಲಿ ಸಮರ್ಥವಾಗಿ ನಿಭಾಯಿಸೋಣ ಎಂದಿದ್ದಾರೆ.

Loading

Leave a Reply

Your email address will not be published. Required fields are marked *