ಹಾವೇರಿ: ಈ ಸರ್ಕಾರದಲ್ಲಿ ಯಾವುದೂ ಸರಿಯಿಲ್ಲ. ಸಚಿವರ ನಡುವೆ ಹೊಂದಾಣಿಕೆಯಿಲ್ಲ. ಸರ್ಕಾರ ಗೊಂದಲದ ಗೂಡಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಿಗ್ಗಾವಿ ಕ್ಷೇತ್ರದ ಸವಣೂರು ತಾಲೂಕಿನ ಹುರುಳಿಕುಪ್ಪಿ ಗ್ರಾಮದಲ್ಲಿ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿದಿನ ಈ ಸರ್ಕಾರದ ಮಂತ್ರಿಗಳು ಒಂದಿಲ್ಲೊಂದು ಗೊಂದಲದ ಹೇಳಿಕೆ ಕೊಡುವುದನ್ನು ನೋಡಿದರೆ, ಈ ಸರ್ಕಾರದ ಒಳಗಡೆ ಯಾವದೂ ಸರಿ ಇಲ್ಲ ಸರ್ಕಾರ ಗೊಂದಲದ ಗೂಡಾಗಿದೆ, ಸಚಿವರ ನಡುವೆ ಒಬ್ಬರಿಗೊಬ್ಬರ ಸಹಕಾರ ಇಲ್ಲ. ಕ್ಯಾಬಿನೆಟ್ ನಲ್ಲಿ ಒಕ್ಕಟ್ಟಿಲ್ಲ ಈ ಬಗ್ಗೆ ಕಾಂಗ್ರೆಸ್ ಶಾಸಕರಲ್ಲಿ ಆಕ್ರೋಶ ಇದೆ. ಕರ್ನಾಟಕದ ಜನರಿಗೆ ಈ ಸರ್ಕಾರದ ಇದೆ ಎಂಬ ಭಾವನೆ ಇಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಬರ ಬಂದರೆ ನೆರವಿಲ್ಲ, ಕಾವೇರಿ ವಿಚಾರದಲ್ಲಿ ನೆರವಾಗುತ್ತಿಲ್ಲ. ನಾಲ್ಕು ತಿಂಗಳಲ್ಲಿ ಈ ಸರ್ಕಾರ ಜನರ ಪ್ರೀತಿಯನ್ನು ಕಳೆದಕೊಂಡಿದೆ. ಸಚಿವರ ಮೇಲೆ ಮುಖ್ಯಮಂತ್ರಿಗಳ ನಿಯಂತ್ರಣ ಇಲ್ಲ ಎಂದರು.