ಉಡುಪಿ: ಶೆಟ್ಟರ್ ಆಗಮನದಿಂದ ಪಕ್ಷದ ಶಕ್ತಿ ವೃದ್ಧಿಯಾಗುತ್ತದೆ. ಇದರಿಂದ ನಮ್ಮ ವಿಶ್ವಾಸ ಹೆಚ್ಚಾಗಿದೆ ಎಂದು ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ್ ಆಗಮನದಿಂದ ಪಕ್ಷದ ಶಕ್ತಿ ವೃದ್ಧಿಯಾಗುತ್ತದೆ. ಇದರಿಂದ ನಮ್ಮ ವಿಶ್ವಾಸ ಹೆಚ್ಚಾಗಿದೆ. ಮತ್ತಷ್ಟು ನಾಯಕರು ಬಿಜೆಪಿಗೆ ಮರಳುತ್ತಾರೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.
ಶೆಟ್ಟರ್ ಸುದೀರ್ಘ ರಾಜಕೀಯ ಅನುಭವಿ ಮತ್ತು ಮುತ್ಸದ್ದಿ. ಅವರು ಜನಸಂಘ ಕಾಲದಿಂದ ಬಿಜೆಪಿ ಕಟ್ಟಿದವರು. ಅವರು ಪಕ್ಷಕ್ಕೆ ಮರಳಿರುವುದು ಸಂತೋಷ ಹಾಗೂ ಸಮಾಧಾನ ತಂದಿದೆ. ಅವರು ಬಿಜೆಪಿಯ ಪರಮೋಚ್ಚ ನಾಯಕರನ್ನು ಎಂದೂ ಟೀಕಿಸಿಲ್ಲ. ಆರೋಗ್ಯಕರ ಟೀಕೆಗಳನ್ನು ಮಾತ್ರ ಮಾಡುತ್ತಿದ್ದರು. ಶೆಟ್ಟರ್ ಬಿಜೆಪಿಗೆ ಮರಳಿದ ಕ್ರೆಡಿಟ್ ಪಕ್ಷಕ್ಕೆ ಸಲ್ಲುತ್ತದೆ ಎಂದಿದ್ದಾರೆ.